ದಿನದ ಸುದ್ದಿ
ಉದ್ಯೋಗ ಸೃಷ್ಟಿ ಯೋಜನೆಗೆ 17 ಸಾವಿರದ 836ಕೋಟಿ ಮೊತ್ತದ ಬಂಡವಾಳ ಹೂಡಿಕೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ 17 ಸಾವಿರದ 835 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ-ಎಸ್‌ಎಚ್‌ಎಲ್‌ಸಿಸಿ ಯ 63ನೇ ಸಭೆ ಅನುಮೋದನೆ ನೀಡಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದಲ್ಲಿ 8 ಸಾವಿರದ 220ಕೋಟಿ ರೂಪಾಯಿ ಮೊತ್ತದ 6 ಹೊಸ ಯೋಜನೆಗಳು ಮತ್ತು 9 ಸಾವಿರದ 615ಕೋಟಿ ರೂಪಾಯಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಯೋಜನೆಗಳು ಸುಮಾರು 27 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ 10ಸಾವಿರದ 433ಕೋಟಿ ರೂಪಾಯಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243