Connect with us

ದಿನದ ಸುದ್ದಿ

ಆ. 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ; ಬಿಜೆಪಿ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯ ಪೊಲೀಸ್ ಇಲಾಖೆ ( police Department ) ಸಂಘಪರಿವಾರದ(Sanghaparivar) ಕೈಗೊಂಬೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah ) ಆರೋಪಿಸಿದ್ದಾರೆ.

ಬಿಜೆಪಿ ಪಕ್ಷದ ( BJP Party ) ಪುಂಡರ ಗೂಂಡಾಗಿರಿಗೆ (Rowdyism ) ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ( Kodagu ) ಎಸ್.ಪಿ ಕಚೇರಿಗೆ (SPoffice ) ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರುಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡಾ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ?

ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು. ಬಿಜೆಪಿಯವರು ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರು, ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ?

ಶಿವಮೊಗ್ಗದ ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ. ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರ್ ಎಸ್ ಎಸ್ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ.

ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ.

ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ.. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು.

ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು, ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗ ಮಾಡಿದ ತಮ್ಮದೇ ಪಕ್ಷದ ಕಾರ್ಯಕರ್ತರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?

ಸಾವರ್ಕರ್ ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ 52 ವರ್ಷಗಳ ಕಾಲ ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ?

ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ ಇಲ್ಲ, ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ.

ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ ವಕೀಲ ವೃತ್ತಿ ಸೇವಾನುಭವ ಹೊಂದಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದು ತಾತ್ಕಾಲಿಕ ಹುದ್ದೆಯಾಗಿರುತ್ತದೆ. ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿ 5 ರಲ್ಲಿ ಜೆ.ಹೆಚ್.ಎಂ.ಶಿರಸ್ತೇದಾರರಿಂದ ಅರ್ಜಿ ಪಡೆದು ಇತ್ತೀಚಿನ ಮೂರು ಭಾವಚಿತ್ರ, ಸೇವಾನುಭವ ದೃಢೀಕರಣ ಪತ್ರ, ಬಾರ್ ಕೌನ್ಸಿಲ್ ನೊಂದಣಿ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ, ಪೊಲೀಸ್ ಅಧೀಕ್ಷಕರಿಂದ ಪಡೆದ ಗುಣ, ನಡತೆ ಪ್ರಮಾಣ ಪತ್ರ ಹಾಗೂ ಶೈಕ್ಷಣಿಕ ಅರ್ಹತೆ ದಾಖಲೆಗಳೊಂದಿಗೆ ಜುಲೈ 25 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JOB NEWS | ಎಸ್ಎಸ್ಎಲ್ ಸಿ ಆದವರು ಅರ್ಜಿ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ ಬಿ ಎನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ ಸಿ.ಬಿ.ಎನ್‍ನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷಗಳು. ಸಿ.ಬಿ.ಐ.ಸಿನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷಗಳು. ಎಸ್ಸಿ, ಎಸ್ಟಿ, ಒ.ಬಿ.ಸಿ, ಇ.ಎಸ್.ಎಮ್ ಅಭ್ಯರ್ಥಿಗಳಿಗೆ ನಿಯಾಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.gov.in or www.ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192259446 ಇಲ್ಲಿಗೆ ಸಂಪರ್ಕಿಸಬಹುದಾಗಿದೆ. ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ದೂ.ಸಂ: 08192230934 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending