ದಿನದ ಸುದ್ದಿ
ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ; ಇದು ಬಿಜೆಪಿಯು ‘ಭೂತಾಯಿಗೆ ಬಗೆವ ದ್ರೋಹ’ : ಸಿದ್ದರಾಮಯ್ಯ ಆಕ್ರೋಶ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/03/Siddaramaiah_assembly_suddidina.jpg&description=ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ; ಇದು ಬಿಜೆಪಿಯು ‘ಭೂತಾಯಿಗೆ ಬಗೆವ ದ್ರೋಹ’ : ಸಿದ್ದರಾಮಯ್ಯ ಆಕ್ರೋಶ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/03/Siddaramaiah_assembly_suddidina.jpg&description=ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ; ಇದು ಬಿಜೆಪಿಯು ‘ಭೂತಾಯಿಗೆ ಬಗೆವ ದ್ರೋಹ’ : ಸಿದ್ದರಾಮಯ್ಯ ಆಕ್ರೋಶ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ, ಬೆಂಗಳೂರು: ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ ಎಂದು ಮುಖ್ಯಂಮತ್ರಿ ಸಿದ್ದರಾಮಯ್ಯ ಹೇಳಿದರು.
ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತಂದು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು, ರಾಜ್ಯ ಬಿಜೆಪಿ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ ಎಂದರು.
ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಭೂಮಿ ಖರೀದಿಗೆ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಕರೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರಕ್ಕೆ ದಂಡ ವಿಧಿಸುವ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಗರಿಷ್ಠ ಭೂಮಿತಿಯ ಸೆಕ್ಷನ್ 63ರ ರದ್ದತಿ ಭೂತಾಯಿಗೆ ಬಗೆವ ದ್ರೋಹ ಎಂದು ಕಿಡಿಕಾರಿದರು.
ತಿದ್ದುಪಡಿಗೆ ಒಳಗಾಗಿರುವ ಎಲ್ಲಾ ಸೆಕ್ಷನ್ ಗಳು ಭೂಮಲೀಕರ ದೌರ್ಜನ್ಯದಿಂದ ಸಣ್ಣ ರೈತರನ್ನು ರಕ್ಷಿಸುವ ಹಾಗೂ ಸಣ್ಣ ಪುಟ್ಟ ಹಿಡುವಳಿದಾರರ ಅಸಹಾಯಕತೆಯನ್ನು ಶ್ರೀಮಂತರು ಹಾಗು ಉದ್ಯಮಿಗಳು ದುರುಪಯೋಗ ಪಡಿಸಿಕೊಳ್ಳದಂತೆ ತಡೆಹಿಡಿಯುವ ಅವಕಾಶಗಳನ್ನು ಒದಗಿಸುತ್ತಿದ್ದವು ಎಂದು ನುಡಿದರು.
ಈ ಎಲ್ಲಾ ತಿದ್ದುಪಡಿಗಳ ಪರಿಣಾಮವಾಗಿ ಕಾರ್ಪೋರೇಟ್ ಸಂಸ್ಥೆಗಳು, ರಿಯಲ್ ಎಸ್ಟೇಟ್ ಕುಳಗಳು ಮತ್ತು ಶ್ರೀಮಂತರು ಸುಲಭವಾಗಿ ಕೃಷಿ ಭೂಮಿಯನ್ನು ಕಬಳಿಸಬಹುದು. ಸಣ್ಣ ರೈತಾಪಿಗಳು ಇನ್ನಷ್ಟು ವೇಗವಾಗಿ ಹಾಗೂ ಶಾಸನಬದ್ಧವಾಗಿ ಕೃಷಿಯಿಂದ ಹೊರದೂಡಲ್ಪಡುತ್ತಾರೆ ಎಂದರು.
ಭೂ ಸುಧಾರಣೆ ಕಾಯ್ದೆಯ ಉಲ್ಲಂಘನೆ ಮಾಡಿರುವ ಅಂದಾಜು 60,000 ಎಕರೆ ಜಮೀನು ಒಳಗೊಂಡಿರುವ 13,814 ಪ್ರಕರಣಗಳು ರಾಜ್ಯದ ನ್ಯಾಯಾಲಯದಲ್ಲಿವೆ. ಪ್ರಸ್ತಾಪಿತ ತಿದ್ದುಪಡಿಯಿಂದ ಈ ಎಲ್ಲ ಪ್ರಕರಣಗಳು ರದ್ದಾಗಿ ಅಕ್ರಮಗಳೆಲ್ಲ ಸಕ್ರಮವಾಗಲಿವೆ. ಈ ಭೂಗಳ್ಳರನ್ನು ರಕ್ಷಿಸಲಿಕ್ಕಾಗಿಯೇ ತಿದ್ದುಪಡಿ ತರಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಭೂ ಸುಧಾರಣೆ ಕಾಯ್ದೆ ಉಲ್ಲಂಘಣೆಯ 13,814 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಭೂಮಿಗೆ ಚಿನ್ನದ ಬೆಲೆ ಇರುವ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿದೆ. ಈ ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಶಾಮೀಲಾಗಿ ಸರ್ಕಾರ ಈ ತಿದ್ದುಪಡಿ ತಂದಿದೆ ಎಂದು ಕಿಡಿಕಾರಿದರು.
ಭೂ ಸುಧಾರಣೆ ತಿದ್ದುಪಡಿಯ ಹಿಂದೆ ಕೋಟ್ಯಂತರ ರೂಪಾಯಿಗಳ ಹಗರಣ ಇದೆ. ಅಂದಾಜು 60,000 ಎಕರೆ ಜಮೀನನ್ನು ಪಡೆಯಲಿರುವ ಭೂಗಳ್ಳರಿಂದ ಆಡಳಿತ ಪಕ್ಷದವರಿಗೆ ಏನು ಲಾಭ ಎನ್ನುವುದನ್ನು ನಾನು ವಿವರಿಸಲು ಹೋಗುವುದಿಲ್ಲ ಎಂದರು.
ಭೂ ಸುಧಾರಣಾ ಕಾಯ್ದೆಯಿಂದಾಗಿ ಭ್ರಷ್ಟಾಚಾರ ಹೆಚ್ಚಾಗಿದೆ, ಅಧಿಕಾರಿಗಳು ಲಂಚ ಹೊಡೆಯಲು ಅನುಕೂಲವಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಲಂಚ ಎಲ್ಲಿ ಇಲ್ಲ? ತಹಶೀಲ್ದಾರ್, ಪೊಲೀಸ್, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚ ಇಲ್ಲವೇ? ನಿರ್ಮೂಲನೆ ಮಾಡಬೇಕಾಗಿರುವುದು ಲಂಚವನ್ನೇ? ಇಲ್ಲ ಕಾನೂನನ್ನೇ? ಎಂದು ಪ್ರಶ್ನಿಸಿದರು.
ಅಧಿಕಾರಿಗಳು ಲಂಚಕೋರರಾಗಿದ್ದಾರೆ ಎಂದರೆ ಸರ್ಕಾರ ಅವರನ್ನು ನಿಯಂತ್ರಿಸಲು ವಿಫಲವಾಗಿದೆ ಇಲ್ಲವೇ ಸರ್ಕಾರವೇ ಲಂಚಕೋರರ ಜೊತೆ ಶಾಮೀಲಾಗಿದೆ ಎಂದರ್ಥವಲ್ಲವೇ? ಇದನ್ನೂ ಸಮರ್ಥಿಸಿಕೊಳ್ಳಲು ನಾಚಿಕೆ ಆಗುವುದಿಲ್ವೇ? ಎಂದರು.
ಇಡೀ ದೇಶ ಕೊರೊನಾ ಸೋಂಕಿನಿಂದ ತತ್ತರಿಸುತ್ತಿರುವಾಗ ತರಾತುರಿಯಲ್ಲಿ ಈ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ತರುವ ಅನಿವಾರ್ಯತೆ ಏನಿತ್ತು? ಇದನ್ನು ತರುವ ಮೊದಲು ರೈತರ ಜೊತೆ ಸಮಾಲೋಚನೆ ಮಾಡಿದ್ದೀರಾ? ವಿರೋಧ ಪಕ್ಷಗಳ ಜೊತೆ ಚರ್ಚೆ ಮಾಡಿದ್ದೀರಾ? ಕನಿಷ್ಠ ನಿಮ್ಮ ಪಕ್ಷದೊಳಗಾದರೂ ಚರ್ಚೆ ಮಾಡಿದ್ದೀರಾ? ಎಂದು ನುಡಿದರು.
ಈ ಭೂ ಸುಧಾರಣಾ ತಿದ್ದುಪಡಿಯಿಂದ ಕೃಷಿಗೇನು ತೊಂದರೆಯಾಗಲಾರದು ಎಂದು ಹೇಳುತ್ತೀರಲ್ಲಾ? ಕೃಷಿಯೇತರ ಬಳಕೆಗೆ ಕೃಷಿ ಭೂಮಿಯನ್ನು ಬಳಸಿಕೊಳ್ಳಬಾರದೆಂಬ ನಿರ್ಬಂಧವೇನಾದರೂ ತಿದ್ದುಪಡಿಯಲ್ಲಿದೆಯೇ? ಯಾಕೆ ಅದನ್ನು ಸೇರಿಸಿಲ್ಲ? ಇದರ ಹಿಂದಿನ ದುರುದ್ದೇಶ ಏನು? ಎಂದರು.
ರೈತ ವಿರೋಧಿಯಾಗಿರುವ ಭೂ ಸುಧಾರಣಾ ತಿದ್ದುಪಡಿಯನ್ನು ನಾವು ಮಾತ್ರವಲ್ಲ, ಆಡಳಿತ ಪಕ್ಷದ ಸದಸ್ಯರಲ್ಲಿ ಆತ್ಮಸಾಕ್ಷಿ ಇದ್ದರೆ ಅವರೂ ವಿರೋಧಿಸಬೇಕು ಎಂದು ಮನವಿ ಮಾಡುತ್ತೇವೆ. ನಮ್ಮ ಹೋರಾಟ ಸದನಕ್ಕೆ ಮಾತ್ರ ಸೀಮಿತವಲ್ಲ, ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್‌ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

