Connect with us

ದಿನದ ಸುದ್ದಿ

ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನ : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದು ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋದಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ? ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?

ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ.ಇದಕ್ಕೆ ಏನು ಪರಿಹಾರ? ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು.

ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ, ನೂತನ ಪರಿಷ್ಕೃತ ಪಠ್ಯ ರಚನೆಯಾಗುವ ವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿಗಳು ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು.

ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು.

ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಒತ್ತಾಯಿಸ ಬೇಕು ಎಂದು‌ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending