ದಿನದ ಸುದ್ದಿ

ವಿಶ್ವನಾಥ್ ಕಿಡಿಗೇಡಿ ಹೇಳಿಕೆಗಳಿಗೆ ಕುಖ್ಯಾತರು : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ,ಬೆಂಗಳೂರು : ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು.ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ನಲ್ಲಿ‌ ಸಿದ್ದರಾಮಯ್ಯ ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ,ಈಗ ವಿಶ್ವನಾಥ್… ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version