ದಿನದ ಸುದ್ದಿ

ಯಡಿಯೂರಪ್ಪನವರೇ ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ? : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರೇ,ನೀವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು 3 ದಿನ, ಸಂಪುಟ ರಚನೆಗೆ 26 ದಿನ ಮತ್ತು ಖಾತೆ ಹಂಚಿಕೆಗೆ 6 ದಿನ ತೆಗೆದುಕೊಂಡಿರಿ. ಈಗ ಭಿನ್ನಮತ ಶಮನಕ್ಕೆ ಇನ್ನೆಷ್ಟು ದಿನ ಬೇಕು?ಈ ಎಲ್ಲದರ ನಡುವೆ ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತುಗಳನ್ನು ಗಮನಿಸಿದರೆ ಜನಪ್ರತಿನಿಧಿಗಳ ದನಿ ಉಡುಗಿಹೋಗಿ ಸಂವಿಧಾನೇತರ ಶಕ್ತಿಗಳೇ ವಿಜೃಂಭಿಸಿರುತ್ತಿರುವ ಹಾಗೆ ಕಾಣಿಸುತ್ತಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ.
ಸ‌ನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅವರ ರಾಜಕೀಯ ಎದುರಾಳಿಯಾದ ನನ್ನಂತಹವನಲ್ಲಿಯೂ ಅವರ ಬಗ್ಗೆ ಅನುಕಂಪ‌ ಮೂಡುವಂತಾಗಿದೆ‌ ಎಂದಿದ್ದಾರೆ.

Trending

Exit mobile version