Connect with us

ದಿನದ ಸುದ್ದಿ

ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ರಾಜ್ಯದ ಯಾವ ಮೂಲೆಯಲ್ಲಿ ಕೋಮುಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಬಿಜೆಪಿ ಕರ್ನಾಟಕ (BJP Karnataka) ನಾಯಕರಿಗೆ ಚಟವಾಗಿಬಿಟ್ಟಿದೆ. ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( siddaramaiah) ಹೇಳಿದ್ದಾರೆ.

ನಮ್ಮ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ರಾಜಕೀಯ ಘರ್ಷಣೆ ಇಲ್ಲವೆ ಕೋಮುಗಲಭೆಗಳಿಗೆ ಸಂಬಂಧ ಪಟ್ಟಂತೆ ಒಟ್ಟು 23 ಹತ್ಯೆಗಳಾಗಿವೆ. ಇವುಗಳಲ್ಲಿ ಹನ್ನೆರಡು ಮೃತವ್ಯಕ್ತಿಗಳು ಹಿಂದೂಗಳು, ಉಳಿದ ಹನ್ನೊಂದು ಮಂದಿ ಮುಸ್ಲಿಮರು.

ಹನ್ನೆರಡು ಹಿಂದೂಗಳ ಹತ್ಯೆಯ ಎಂಟು ಪ್ರಕರಣಗಳಲ್ಲಿ ಪಿ.ಎಫ್.ಐ/ಎಸ್.ಡಿ.ಪಿ.ಐ ಸಂಘಟನೆಯ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ. ಒಂದು ಪ್ರಕರಣದಲ್ಲಿ ಮಾತ್ರ ಕಾಂಗ್ರೆಸ್ ಕಾರ್ಯಕರ್ತ ಆರೋಪಿಯಾಗಿದ್ದಾನೆ. ಇವರಲ್ಲಿ 99 ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಡೆಯುತ್ತಿದೆ.

2013 ರಿಂದ 2017ರ ವರೆಗಿನ ಅವಧಿಯಲ್ಲಿ ನಡೆದ ಹನ್ನೊಂದು ಮುಸ್ಲಿಮರ ಹತ್ಯೆಗಳ ಎಂಟು ಪ್ರಕರಣಗಳಲ್ಲಿ ಬಜರಂಗದಳ, ತಲಾ ಒಂದು ಪ್ರಕರಣಗಳಲ್ಲಿ ಹಿಂದೂ ಜಾಗರಣಾ ವೇದಿಕೆ, ಶ್ರೀರಾಮಸೇನೆ ಮತ್ತು ವಿಶ್ವ ಹಿಂದೂ ಪರಿಷತ್‌ ನ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ. 115 ಆರೋಪಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಲಾಗಿದೆ.
ವೈಯಕ್ತಿಕ ಕಾರಣಗಳಿಗಾಗಿ ಹತ್ತು ಹತ್ಯೆಗಳಾಗಿದ್ದು 61 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರು ಹತ್ಯೆಯ ಕಾರಣದ ತನಿಖೆ ನಡೆಸುತ್ತಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ತನಿಖೆ ಪೂರ್ಣಗೊಂಡಿರಲಿಲ್ಲ. ಈ ಎಲ್ಲ ಪ್ರಕರಣಗಳ ಮೊಕದ್ದಮೆಗಳ ಸಂಖ್ಯೆ ಸಮೇತ ಪುಸ್ತಕದಲ್ಲಿ ಪ್ರಕಟಿಸಲಾಗಿದೆ.

ಈ ಹತ್ಯೆ ಪ್ರಕರಣಗಳ ತನಿಖೆಗೆ ಪೊಲೀಸರು ಸಮರ್ಥರಾಗಿದ್ದರೂ ವಿರೋಧ ಪಕ್ಷಗಳ ಒತ್ತಾಯಕ್ಕಾಗಿ ಕೆಲವು ಪ್ರಕರಣಗಳನ್ನು ಸಿಬಿಐ ಮತ್ತು ಎನ್ಐಎಗೆ ವಹಿಸಲಾಗಿತ್ತು. ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐಗೆ ಮತ್ತು ಬೆಂಗಳೂರಿನ ರುದ್ರೇಶ್ ಕೊಲೆ ಪ್ರಕರಣವನ್ನು ಎನ್ಐಎ ಗೆ ವಹಿಸಲಾಗಿದೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending