ದಿನದ ಸುದ್ದಿ
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ; ಇಲ್ಲಿವೆ ಪ್ರಮುಖಾಂಶಗಳು

ಸುದ್ದಿದಿನಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ 4 ಲಕ್ಷದ 9 ಸಾವಿರದ 549 ಕೋಟಿ ರೂ ಬಜೆಟ್ ಗಾತ್ರದ ಕರ್ನಾಟಕ ರಾಜ್ಯ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ.
ಕೃಷಿ ಮತ್ತು ಇನ್ನಿತರ ದಾಖಲೀಕರಣ, ಮೂಲಸೌಕರ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್ ಪೂರೈಕೆ, ಗೋದಾಮುಗಳ ಒದಗಿಸುವಿಕೆ ಮುಂತಾದ ಚಟುವಟಿಕೆಗಳ ಮೂಲಕ ಗ್ರಾಮಗಳ ಅಭಿವೃದ್ದಿಗೆ ಮತ್ತು ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ಭಾಣದಲ್ಲಿ ತಿಳಿಸಿದ್ದಾರೆ.
2024-25ರಲ್ಲಿ ಶೇಕಡ 4ರಷ್ಟು ಬೆಳವಣಿಗೆ ಸಾಧಿಸುವ ಮೂಲಕ ಚೇತರಿಕೆ ಕಂಡಿದ್ದು, ದೇಶದ ಕೃಷಿ ವಲಯದ ಬೆಳವಣಿಗೆ ಶೇಕಡ 3.8ಕ್ಕಿಂತ ಹೆಚ್ಚಾಗಿದೆ. ರಾಜ್ಯ ಸರ್ಕಾರವು ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ಪ್ರಸಕ್ತ ವರ್ಷದಲ್ಲಿ ಒಟ್ಟು 51 ಸಾವಿದ 339 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 51 ಸಾವಿರದ 34 ಕೋಟಿ ರೂಪಾಯಿ ಒದಗಿಸಲಾಗಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂಪಾಯಿ ಅನುದಾನ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು.
ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1 ಸಾವಿರ ರೂಪಾಯಿಗೆ ಏರಿಸಲಾಗುವುದು. ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂಪಾಯಿ ಒದಗಿಸಲಾಗಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆಯನ್ನು 150 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಜಾರಿಗೊಳಿಸಲಾಗುವುದು.
ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂಪಾಯಿ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು ’ನನ್ನ ವೃತ್ತಿ, ನನ್ನ ಆಯ್ಕೆ’ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿಮಾರ್ಗದರ್ಶನ ನೀಡಲಾಗುವುದು. ಸೌರಶಕ್ತಿಯನ್ನು ಬಳಸಿ ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ಲಿನ ಹೊರೆಯನ್ನು ತಗ್ಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ-ಗ್ರಿಡ್‌ಗಳನ್ನು ಸ್ಥಾಪಿಸಲಾಗುವುದು.
ಬೆಂಗಳೂರನ್ನು ಅಂತಾರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ಬ್ರ‍್ಯಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮುಗಡಪತ್ರ ಭಾಷಣದಲ್ಲಿ ಘೋಷಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅಲರ್ಟ್..!

- ಸುನೀತ ಕುಶಾಲನಗರ
ನದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.
ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .
ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.
ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.
ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು
ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!
ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.
ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ7 days ago
ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ7 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ7 days ago
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ
-
ದಿನದ ಸುದ್ದಿ7 days ago
ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
-
ದಿನದ ಸುದ್ದಿ6 days ago
ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು
-
ಅಂಕಣ6 days ago
ಸಿದ್ಧಾಂತ ಮತ್ತು ಪತ್ರಿಕೋದ್ಯಮ