ರಾಜಕೀಯ
ಕರುಣಾನಿಧಿ ನಿಧನಕ್ಕೆ ಸಿದ್ದು ಸಂತಾಪ
ಸುದ್ದಿದಿನ ಡೆಸ್ಕ್: ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ಖಾತೆಯಲ್ಲಿ ಸಂತಾನ ಹಂಚಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕರುಣಾನಿಧಿ ಅವರ ನಿಧನದಿಂದ ತಮಿಳುನಾಡಿಗೆ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ನ್ಯಾಯದ ನೇತಾರನಂತಿದ್ದ ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ಅವರ ಸಾವಿನಿಂದ ದೇಶ ಹಾಗೂ ತಮಿಳುನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದು ಟ್ವೀಟ್ ಮಾಡಿದ್ದಾರೆ.
ಗಣ್ಯರ ಕಂಬನಿ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವರು ಸಂತಾನ ಸೂಚಿಸಿದ್ದಾರೆ.
English summary: Siddaramaiah express deep condoles for Karunanidhi death