ದಿನದ ಸುದ್ದಿ
ಮಾಜಿ ಸಿಎಂ ಆದ್ರೂ ಕಡಿಮೆಯಾಗಿಲ್ಲ ಸಿದ್ದು ಫೇಮ್

ಸುದ್ದಿದಿನ ಡೆಸ್ಕ್: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈಲಿ ಈಗ ಹೇಳಿಕೊಳ್ಳುವಂತ ದೊಡ್ಡ ಅಧಿಕಾರವಿಲ್ಲ. ಆದರೂ, ಅವರಿಗಿರುವ ಫೇಮ್ ಸ್ವಲ್ಪವೂ ಕೂಡ ಕಡಿಮೆಯಾಗಿಲ್ಲ.
ಮೈಸೂರಿನ ಡಿಆರ್‍ಸಿ ಚಿತ್ರಮಂದಿರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ನೋಡಲು ಬಂದಿದ್ದ ಸಿದ್ದರಾಮಯ್ಯ ಅವರು ಒಬ್ಬ ಜನಪ್ರಿಯ ಸೆಲಬ್ರಿಟಿಗೆ ಸಿಗುವಷ್ಟೇ ಸ್ವಾಗತ ಕಾದಿತ್ತು.
ಸಾಮಾನ್ಯವಾಗಿ ಯುವ ಸಮೂಹದಲ್ಲಿ ರಾಜಕಾರಣಿಗಳ ಬಗ್ಗೆ ಒಲವು ಅಷ್ಟಕ್ಕಷ್ಟೆ. ಆದರೆ, ಸಿದ್ದರಾಮಯ್ಯ ಅವರ ವಿಷಯದಲ್ಲಿ ಹಾಗಲ್ಲ, ತಮ್ಮ ಎಂದಿನ ಸ್ಟೈಲ್‍ನಲ್ಲಿ ಸಿದ್ದರಾಮಯ್ಯ ಅವರು ಬಿಳಿ ಪಂಚೆ, ಸಿಲ್ಕ್ ಶರ್ಟ್ ಹಾಗೂ ಶಲ್ಯದಲ್ಲಿ ಡಿಆರ್‍ಸಿ ಚಿತ್ರಮಂದಿರದ ಆವರಣ ಪ್ರವೇಶಿಸುತ್ತಿದ್ದಂತೆಯೇ ಕಿಕ್ಕಿರಿದ ಯುವಕ, ಯುವತಿಯರು ಸಿದ್ದರಾಮಯ್ಯ ಅವರೊಟ್ಟಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು.
ಚಿತ್ರಮಂದಿರಕ್ಕೆ ಬಂದಿದ್ದ ಹೈ ಕ್ಲಾಸ್ ಜನರು, ಮಕ್ಕಳು ಕೂಡ ಸೆಲ್ಫಿಗಾಗಿ ಹಂಬಲಿಸುತ್ತಿದ್ದರು. ಸಿದ್ದರಾಮಯ್ಯ ಅವರು ಹಮ್ಮು ಬಿಮ್ಮು ಇಲ್ಲದೆ ಬಂದವರನ್ನು ಆತ್ಮೀಯವಾಗಿ ಮಾತನಾಡಿಸಿ ಸೆಲ್ಫಿಗೆ ಪೋಸ್ ಕೊಟ್ಟರು.
ಇನ್ನು ಚಿತ್ರಮಂದಿರದೊಳಗೆ ಹೋಗುತ್ತಿದ್ದಂತೆಯೇ ಸೀಟ್‍ನಲ್ಲಿ ಕುಳಿತಿದ್ದ ಅಸಂಖ್ಯಾತ ಪ್ರೇಕ್ಷಕರ ವರ್ಗ ಎದ್ದುನಿಂತು ಸಿದ್ದರಾಮಯ್ಯ ಅವರಿಗೆ ಗೌರವ ಸೂಚಿಸಿದರು. ಇನ್ನೂ ಕೆಲವರು ಅವರ ಬಳಿ ಓಡಿ ಬಂದು ಕೈ ಕುಲುಕಿದರು.
ಅಂದಹಾಗೆ ರಿಶಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾವನ್ನು ಸಿದ್ದರಾಮಯ್ಯ ಅವರು ಬಹಳ ಮೆಚ್ಚಿಕೊಂಡಿದ್ದಾರೆ. ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿಯುವ ಸಿನಿಮಾ ಇದು ಎಂದು ಶ್ಲಾಘಿಸಿದ್ದಾರೆ.

ದಿನದ ಸುದ್ದಿ
ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ಲೈಫ್ ಸ್ಟೈಲ್5 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ7 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ6 days ago
ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್ಗೆ ಸೂಚನೆ