Connect with us

ರಾಜಕೀಯ

“ಹಾಲು ಕುಡಿದ ಮಕ್ಕಳೇ ಬದುಕೋದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವಾ?” : ಯಡಿಯೂರಪ್ಪ ಸರ್ಕಾರಕ್ಕೆ ಸಿದ್ದರಾಮಯ್ಯ ವ್ಯಂಗ್ಯ

Published

on

ಸುದ್ದಿದಿನ,ಹುಬ್ಬಳ್ಳಿ : ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ. ಬಂಡಾಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರ ನಡೆಸುವುದು ಸುಲಭದ ಮಾತಲ್ಲ, ‘ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟವಿರುವಾಗ, ವಿಷ ಕುಡಿದ ಮಕ್ಕಳು ಬದುಕುತ್ತವಾ?’ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಪ್ರವಾಹ ಪರಿಸ್ಥಿತಿ ಸಮೀಕ್ಷೆಗೆ ಕೇಂದ್ರದ ತಂಡ ಆಗಮಿಸಿದೆ. ಪ್ರವಾಹದಿಂದಾಗಿ ಸುಮಾರು 20 ಲಕ್ಷ ಎಕರೆ ಬೆಳೆ ಹಾನಿ, 80 ಜನರ ಪ್ರಾಣ ಹಾನಿಯಾಗಿದೆ, ಲಕ್ಷಾಂತರ ಮನೆಗಳು ನೆಲಸಮಗೊಂಡಿವೆ, ಸಾವಿರಾರು ಜಾನುವಾರುಗಳು ಸಾವಿಗೀಡಾಗಿವೆ. ಇದನ್ನೆಲ್ಲ ಸೂಕ್ತವಾಗಿ ಸಮೀಕ್ಷೆ ನಡೆಸಿ, ನ್ಯಾಯಯುತ ಪರಿಹಾರ ಒದಗಿಸಲಿ ಎಂದು ಒತ್ತಾಯಿಸುತ್ತೇನೆ. ಮುಖ್ಯಮಂತ್ರಿಗಳು ಒಳಗೊಂಡಂತೆ ಸರ್ಕಾರದ ಎಲ್ಲ ಮಂತ್ರಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗೆ ಸ್ಪಂದಿಸಬೇಕು. ಇದನ್ನು ಬಿಟ್ಟು ನಿತ್ಯ ಬೆಂಗಳೂರಿನಿಂದ ದೆಹಲಿಗೆ, ದೆಹಲಿಯಿಂದ ಬೆಂಗಳೂರಿಗೆ ಓಡಾಡುತ್ತಿದ್ದರೆ ಜನರ ಕಷ್ಟ ಕೇಳುವವರಾರು? ಅನೈತಿಕ ಮಾರ್ಗದ ಮೂಲಕ‌ ಅಧಿಕಾರ ಹಿಡಿದವರ ಕತೆಯೇ ಹೀಗೆ, ಅವರಿಗೆ ಜನಪರ ಕಾಳಜಿಯಿರುವುದಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ತಾಣ ಒದಗಿಸುವಂತೆ ಕಳೆದ ವಾರವೇ ನಾನು ಆಗ್ರಹಿಸಿದ್ದೆ, ಆದರೂ ಸರ್ಕಾರ ಇನ್ನು ಕಣ್ಣುಮುಚ್ಚಿ ಕೂತಿದೆ. ಎರಡ್ಮೂರು ಸಾವಿರ ಪರಿಹಾರ ನೀಡಿದರೆ ಜನರ ಕಷ್ಟ ದೂರಾಗುವುದಿಲ್ಲ. ನಷ್ಟವನ್ನು ಸರಿಯಾಗಿ ಅಂದಾಜಿಸಿ, ಪರಿಹಾರ ಒದಗಿಸಬೇಕು. ಇದಕ್ಕೆ ಬೇಕಾದ ಅನುದಾನವನ್ನು ಕೇಂದ್ರದಿಂದ ಪಡೆಯಲಿ ಅಥವಾ ರಾಜ್ಯ ಸರ್ಕಾರವೇ ಭರಿಸಲಿ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

Published

on

ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್‍ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.

ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.

ಪೂರಕ ದಾಖಲಾತಿ

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್‍ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್‍ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತದಾನದಲ್ಲಿ ಮಹಿಳೆಯರದೇ ಮೇಲುಗೈ

Published

on

ಸುದ್ದಿದಿನ ಡೆಸ್ಕ್ : ಲೋಕಸಭೆಯ ಆರನೇ ಹಂತದ ಚುನಾವಣೆಯಲ್ಲಿ ಪುರುಷರಿಗಿಂತ ಶೇ.3ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದೇ ತಿಂಗಳ 25 ರಂದು ನಡೆದ ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಮತದಾರರ ಅಂಕಿ-ಅಂಶವನ್ನು ಬಿಡುಗಡೆಗೊಳಿಸಿರುವ ಚುನಾವಣಾ ಆಯೋಗ, ಶೇಕಡ 61.95 ಅರ್ಹ ಪುರುಷ ಮತದಾರರಿಗೆ ಹೋಲಿಸಿದರೆ. ಶೇಕಡ 64.95 ಅರ್ಹ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ, ಇದಲ್ಲದೆ, ಶೇಕಡ 18.67 ರಷ್ಟು ತೃತೀಯಲಿಂಗಿಗಳ ಮತದಾನದಲ್ಲಿ ಪಾಲ್ಗೊಂಡರು ಎಂದು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243|

Continue Reading

ದಿನದ ಸುದ್ದಿ

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

Published

on

ಸುದ್ದಿದಿನ ಡೆಸ್ಕ್ : ಇತ್ತೀಚೆಗಷ್ಟೇ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಬಿಎಸ್ ವೈ ಅವರ ಬಳಿ ಸಹಾಯ ಕೋರಲು ಹೋದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಅನ್ನು ಮಹಿಳೆ ದಾಖಲಿಸಿದ್ದರು.

ದೂರುದಾರೆಯು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರನ್ನು ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಆದರೆ ನಿನ್ನೆಯಷ್ಟೇ ಅವರು ಚೆನ್ನಾಗಿದ್ದರು ಎಂದು ಮೂಲಗಳು ಹೇಳುತ್ತಿವೆ. ವೈದ್ಯರ ವರದಿಯನ್ನು ಪೊಲೀಸರು ಎದುರು ನೋಡುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending