ದಿನದ ಸುದ್ದಿ

ರೈತ ನಾಯಕ‌ ರಾಕೇಶ್ ಟಿಕಾಯತ್ ಮೇಲೆ ; ದುಷ್ಕರ್ಮಿಗಳನ್ನು ಜೈಲಿಗೆ ಅಟ್ಟದಿದ್ದರೆ ಸಿಎಂ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ : ಬೊಮ್ಮಾಯಿ ಮೇಲೆ ಸಿದ್ದರಾಮಯ್ಯ ಆಕ್ರೋಶ

Published

on

ಸುದ್ದಿದಿನ ಡೆಸ್ಕ್ : ರೈತ ನಾಯಕ‌ ರಾಕೇಶ್ ಟಿಕಾಯತ್ ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ.ಮುಖ್ಯಮಂತ್ರಿಗಳೇ ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ. ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ಧಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ.ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಕಿಡಿಕಾರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version