ರಾಜಕೀಯ
ಮೋದಿಗೆ ಧಮ್ ಇದ್ರೆ ತಾನು ಕೆಲಸ ಮಾಡಿರೋ ಪಟ್ಟಿ ಕೊಡಲಿ : ಸಿದ್ದರಾಮಯ್ಯ ಸವಾಲ್
ಸುದ್ದಿದಿನ,ಕುಂದಗೋಳ : ನಾನು ಮುಖ್ಯಮಂತ್ರಿಯಾಗಿ ಏನು ಕೆಲಸ ಮಾಡಿದೆ ಎಂದು ಪಟ್ಟಿ ಕೊಡುತ್ತೇನೆ. ನರೇಂದ್ರ ಮೋದಿ ಧಮ್ ಇದ್ರೆ, ಪ್ರಾಮಾಣಿಕನಾಗಿದ್ದರೆ ತಾನೇನು ಕೆಲಸ ಮಾಡಿದ್ದೇನೆಂದು ಪಟ್ಟಿಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.
ಉಪ ಚುನಾವಣೆ ಹಿನ್ನೆಲೆಯಲ್ಲಿ ಕುಂದಗೋಳ ವಿಧಾನಸಭೆ ಕ್ಷೇತ್ರದ ಸಂಶಿಯಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕುಸುಮಾವತಿ ಶಿವಳ್ಳಿ ಅವರ ಪರ ಮತ ಯಾಚಿಸಿದ ಅವರು, ಬಿಜೆಪಿಯವರು ಚಿಕ್ಕನಗೌಡರಿಗೆ ವೋಟು ಕೊಡಿ ಎಂದು ಕೇಳಲ್ಲ, ಪ್ರಧಾನಿ ನರೇಂದ್ರ ಮೋದಿಗೆ ವೋಟು ಕೊಡಿ ಎಂದು ಕೇಳುತ್ತಾರೆ. ಹಾಗಿದ್ದಾರೆ ಚಿಕ್ಕನಗೌಡ, ಪ್ರಲ್ಹಾದ್ ಜೋಶಿ ಯಾಕೆ ನಿಂತಿದ್ದಾರೆ(?)ಎಂದು ಪ್ರಶ್ನಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ
ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.
ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ
ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು 1ಸಾವಿರದ 700 ವಿಶ್ವವಿದ್ಯಾಲಯಗಳು 45 ಸಾವಿರ ಕಾಲೇಜುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.
ಭಾರತವು ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಪಾಲರು ಕರೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಶಕಗಳ ಬಳಿಕ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ; ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ನಿರೀಕ್ಷೆ
ಸುದ್ದಿದಿನಡೆಸ್ಕ್:ದಶಕಗಳ ಬಳಿಕ ನಾಳೆ ಕಲಬುರಗಿಯ ಮಿನಿ ವಿಧಾನಸೌಧದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಆಡಳಿತ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ಧಿ ಪಟ್ಟಿಯನ್ನು ಸಿದ್ದಪಡಿಸಿ ಈಗಾಗಲೇ ಸರ್ಕಾರಕ್ಕೆ ನೀಡಿದ್ದಾರೆ.
ಕಳೆದ ಒಂದು ದಶಕದ ಹಿಂದೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕಲಬುರಗಿಯಲ್ಲಿ ಮೊದಲ ಬಾರಿಗೆ 1982ರಲ್ಲಿ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು.
ಆ ಬಳಿಕ 2008ರಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸಚಿವ ಸಂಪುಟ ಸಭೆ ನಡೆದಿತ್ತು. 2014ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು, ಇದೀಗ 2024ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡನೇ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಂತೇಬೆನ್ನೂರು | ಈಶ್ವರೀ ವಿ ವಿ ಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ
-
ದಿನದ ಸುದ್ದಿ6 days ago
ದಾವಣಗೆರೆ | ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
-
ದಿನದ ಸುದ್ದಿ5 days ago
ಆತ್ಮಕತೆ | ಮಗು : ಆತಂಕದ ಕ್ಷಣಗಳು
-
ದಿನದ ಸುದ್ದಿ5 days ago
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ4 days ago
ಪುಣೆಯಿಂದ ಹುಬ್ಬಳಿಗೆ ಇಂದಿನಿಂದ ವಂದೇ ಭಾರತ್ ರೈಲು ಸಂಚಾರ
-
ದಿನದ ಸುದ್ದಿ5 days ago
HAL | ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಶೀಘ್ರವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹ
-
ದಿನದ ಸುದ್ದಿ5 days ago
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ