ದಿನದ ಸುದ್ದಿ
ಕೈಲಾಗದವರ ಜತೆ ನನ್ನ ವಾದ ಇಲ್ಲ : ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು : ಒಳ್ಳೆಯ ಕೆಲಸ ಮಾಡಿದವರ ಬಗ್ಗೆ ವರ್ತಮಾನ ಕ್ರೂರವಾಗಿರುತ್ತೆ, ಇತಿಹಾಸ ಸ್ಮರಿಸುತ್ತದೆ.ದೇವರಾಜ ಅರಸು ಅವರ ಜನಪರ ಕೆಲಸಗಳನ್ನು ಮರೆತು ಜನ ಸೋಲಿಸಿದರು.ಅವರನ್ನು ಗುರುಗಳೆಂದು ಈಗ ಹೇಳುತ್ತಿರುವ ನಾಯಕರು ಕೂಡಾ ಬಿಟ್ಟು ಓಡಿಹೋಗಿದ್ದರು. ಆದರೆ ಅರಸು ಅವರನ್ನು ಈಗ ಇತಿಹಾಸ ಸ್ಮರಿಸುತ್ತಿದೆ. ಈರ್ಷ್ಯೆಗೆ ಕಾಲವೇ ಉತ್ತರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಎಂಬ ಹೆಮ್ಮೆ ನನ್ನದು. ಇದನ್ನು ಪುಸ್ತಕ ಮಾಡಿ ಹಂಚಿದ್ದೇನೆ, ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸದಾ ಸಿದ್ದ. ಮೈಪರಚಿಕೊಳ್ಳುತ್ತಿರುವ ಕೈಲಾಗದವರ ಜತೆ ನನ್ನ ವಾದ ಇಲ್ಲ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243