ದಿನದ ಸುದ್ದಿ

ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ತೊರೆಯುವುದಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

Published

on

ಸುದ್ದಿದಿನ, ಬೆಂಗಳೂರು : ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ. ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡುಗಿದ್ದಾರೆ.

ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ. ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ, ಇನ್ನೂ 4 ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂಬ ಭರವಸೆಯಿದೆ ಎಂದಿದ್ದಾರೆ.

ಜೂನ್ 1ರ ಒಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಸೂಕ್ತ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version