ರಾಜಕೀಯ
ರಾಜ್ಯ ಸರ್ಕಾರ ಸುಭದ್ರವಾಗಿದೆ : ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿರುಗೇಟು
ಸುದ್ದಿದಿನ,ಹುಬ್ಬಳ್ಳಿ : ಮೊನ್ನೆ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಪಕ್ಷ ಸಂಘಟನೆಯ ಬಗ್ಗೆ ಮಾತುಕತೆ ನಡೆಸಿದ್ದೆ, ಆದರೆ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದೇನೆ ಎಂದು ತೋರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲ್ಲೋ ಕುಳಿತು ಊಹೆಯ ಆಧಾರದ ಮೇಲೆ ಸುದ್ದಿ ಪ್ರಸಾರ ಮಾಡುವುದು ತಪ್ಪಲ್ಲವೇ? ಈ ರೀತಿಯ ಕಟ್ಟು ಕತೆ, ಊಹೆಗಳು ಇಂದಿನ ಪತ್ರಿಕೋದ್ಯಮಕ್ಕೆ ಮಾರಕವಾದುದ್ದು. ರಾಜ್ಯ ಸರ್ಕಾರ ಸುಭದ್ರವಾಗಿದೆ. ಮುಂದಿನ ನಾಲ್ಕು ವರ್ಷಗಳು ಕೂಡ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. ಈ ಬಗ್ಗೆ ನನಗೆ ಯಾವುದೇ ಅನುಮಾನವಿಲ್ಲ. ಬೇರೆಯವರಿಗೆ ಏಕೆ ಈ ಬಗ್ಗೆ ಆಗಾಗ್ಗೆ ಅನುಮಾನ ಮೂಡುತ್ತದೋ ನನಗೆ ತಿಳಿಯದು ಎಂದು ಹಲವು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243