ರಾಜಕೀಯ

“ಸಿದ್ದರಾಮಯ್ಯನವರು ನಮ್ಮ ನಾಯಕರು”, ಅತೃಪ್ತ ‌ಶಾಸಕರ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ,ಬೆಂಗಳೂರು :‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ, ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

‘ಸಿದ್ದರಾಮಯ್ಯನವರು ನಮ್ಮ‌‌ನಾಯಕರು’ ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ. ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ.
ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷ ಕುಡಿದು, ಕುಡಿದು ನಾನು ವಿಷಕಂಠನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ! ಎಂದು ಅತೃಪ್ತ ಶಾಸಕರ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version