ರಾಜಕೀಯ
ಸಂಪುಟ ವಿಸ್ತರಣೆ ವಿಳಂಬ, ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ಕಿಡಿ
ಸುದ್ದಿದಿನ,ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮಾನ್ಯ ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಅಥವಾ ಸಂಪುಟ ವಿಸ್ತರಣೆಯದ್ದೇ? ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ? ಎಂದು ಕೆಂಡಾಮಂಡಲವಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243