ರಾಜಕೀಯ
ಅನರ್ಹ ಶಾಸಕರು ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರಂತೆ, ಇಂಥವರನ್ನು ಸೋಲಿಸಿ : ಸಿದ್ದರಾಮಯ್ಯ ಮನವಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/11/Siddaramaiah-Suddidina-421.jpg&description=ಅನರ್ಹ ಶಾಸಕರು ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರಂತೆ, ಇಂಥವರನ್ನು ಸೋಲಿಸಿ : ಸಿದ್ದರಾಮಯ್ಯ ಮನವಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/11/Siddaramaiah-Suddidina-421.jpg&description=ಅನರ್ಹ ಶಾಸಕರು ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರಂತೆ, ಇಂಥವರನ್ನು ಸೋಲಿಸಿ : ಸಿದ್ದರಾಮಯ್ಯ ಮನವಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಹೊಸಪೇಟೆ : ಹೊಸಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರಿಗೆ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ಹಿಂದೆ ಆನಂದ್ ಸಿಂಗ್ ನನ್ನ ಬಳಿ ಕಾಂಗ್ರೆಸ್ ಟಿಕೆಟ್ ಕೇಳಿದಾಗ ಏನಪ್ಪಾ ನಿನ್ನ ಹಿನ್ನೆಲೆ ಸರಿಯಿಲ್ಲ, ಅಕ್ರಮ ಗಣಿಗಾರಿಕೆ ಕೇಸಲ್ಲಿ ಜೈಲಿಗೆ ಹೋಗಿ ಬಂದಿದೀಯ, ಇಷ್ಟೆಲ್ಲ ಸಮಸ್ಯೆ ಇದ್ರೆ ಹೇಗಪ್ಪ? ಅಂದೆ. ನಾನು ಇನ್ಮೇಲೆ ಯಾವ ಭ್ರಷ್ಟಾಚಾರವನ್ನೂ ಮಾಡಲ್ಲ, ಕಾಂಗ್ರೆಸ್ಗೆ ನಿಷ್ಠನಾಗಿರ್ತೀನಿ ಅಂತ ನನಗೆ ಮಾತು ಕೊಟ್ಟಿದ್ರು. ಆನಂದ್ ಸಿಂಗ್ ತನ್ನನ್ನು ಆಯ್ಕೆ ಮಾಡಿದ ಜನತೆಗೂ ಬೆಲೆ ಕೊಡದೆ ಪಕ್ಷಾಂತರ ಮಾಡಿ ಮತ್ತೆ ಚುನಾವಣೆ ಎದುರಾಗುವಂತೆ ಮಾಡಿದ್ದಾರೆ. ಯಾಕಪ್ಪ ಆನಂದ್ ಸಿಂಗ್ ನಾವೇನು ದ್ರೋಹ ಮಾಡಿದ್ವಿ ನಿಮ್ಗೆ? ಕ್ಷೇತ್ರದ ಜನತೆ ಮತ ನೀಡಿ ಗೆಲ್ಲಿಸಿದ್ದು ತಪ್ಪಾ? ಅಥವಾ ನಿಮ್ಮ ಮಾತನ್ನು ನಂಬಿ ಪಕ್ಷದ ಟಿಕೆಟ್ ಕೊಟ್ಟಿದ್ದು ತಪ್ಪಾ? ಎಂದು ಪ್ರಶ್ನಿಸಿದರು.
ಆನಂದ್ ಸಿಂಗ್ ಸೇರಿದಂತೆ 15 ಶಾಸಕರು ಪಕ್ಷಾಂತರ ಮಾಡಿರುವುದು ಸಾಬೀತಾಗಿರುವುದರಿಂದ ಸುಪ್ರೀಂ ಕೋರ್ಟ್ ಅವರನ್ನು ರಾಜಕೀಯದಲ್ಲಿ ಮುಂದುವರೆಯಲು ನಾಲಾಯಕ್ ಎಂದು ಹೇಳಿದೆ. ಈಗ ಜನತೆಯ ಸರದಿ, ಈ ಚುನಾವಣೆಯಲ್ಲಿ ಅನರ್ಹ ಶಾಸಕ ಆನಂದ್ ಸಿಂಗ್ರನ್ನು ತಿರಸ್ಕರಿಸಿ, ಶಾಶ್ವತವಾಗಿ ಮನೆಗೆ ಕಳುಹಿಸಿ, ಕೋರ್ಟ್ ತೀರ್ಪನ್ನು ಎತ್ತಿಹಿಡಿಯಬೇಕು. ಈ ಚುನಾವಣೆ ಇಲ್ಲಿನ ಮತದಾರರ ಸ್ವಾಭಿಮಾನದ ಪ್ರಶ್ನೆ. ಆನಂದ್ ಸಿಂಗ್ ಹೆಸರು ಈಗ ಅನರ್ಹ ಸಿಂಗ್ ಆಗಿದೆ. ಅವರಿಗೆ ಬಡವರ ಕಷ್ಟ ಗೊತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಕೇಳಲು ಬಿಡುವಿಲ್ಲ. ಚುನಾವಣೆಯಲ್ಲಿ ಗೆದ್ದಾಗಿನಿಂದ ಈವರೆಗೆ ಕ್ಷೇತ್ರಕ್ಕೇ ಬಂದಿಲ್ಲ. ಇಂಥ ವ್ಯಕ್ತಿ ಬೇಕೇ? ಅಥವಾ ಸರಳ ಸಜ್ಜನ ನಾಯಕ ಘೋರ್ಪಡೆಯವರು ಬೇಕೇ ಎಂದು ಯೋಚಿಸಬೇಕಿದೆ ಎಂದರು.
ಇದೇ ಆನಂದ್ ಸಿಂಗ್, ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ವಿರುದ್ಧ ವಿಧಾನಸಭೆಯಲ್ಲಿ ತೊಡೆತಟ್ಟಿ, ಅವರಿಗೆ ಸವಾಲು ಹಾಕಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದರ ಫಲ ಬಳ್ಳಾರಿಯ ಗಣಿಕಳ್ಳರೆಲ್ಲ ಜೈಲಿಗೆ ಹೋಗಿ ಬಂದಿದ್ದರು. ಇಂಥ ಲೂಟಿಕೋರರ ಕೈಗೆ ಮತ್ತೆ ಅಧಿಕಾರ ಸಿಗಬೇಕಾ? ನಾನು ಪ್ರಚಾರಕ್ಕೆಂದು ಹೋದ ಕಡೆಗಳಲ್ಲಿ ಸರ್ಕಾರ 4 ಕೆ.ಜಿ ಅಕ್ಕಿ ಕೊಡ್ತಿದೆ, ರಾಗಿ, ಗೋಧಿ ನಿಯಮಿತವಾಗಿ ಕೊಡ್ತಿಲ್ಲ ಎಂದು ಜನ ತಮ್ಮ ಕಷ್ಟ ಹೇಳಿಕೊಳ್ತಿದ್ದಾರೆ. ‘ಈ ಕಷ್ಟ ಇನ್ನು ಕೆಲವೇ ದಿನ ಮಾತ್ರ. ಉಪಚುನಾವಣೆ ಫಲಿತಾಂಶದ ನಂತರ ನಮ್ಮ ಸರ್ಕಾರ ಬರುತ್ತೆ, ಆಗ ಮತ್ತೆ 10 ಕೆ.ಜಿ ಅಕ್ಕಿ ಕೊಡ್ತೀವಿ’ ಅಂತ ಅವರಿಗೆ ಧೈರ್ಯ ಹೇಳಿದ್ದೀನಿ. ಆಪರೇಷನ್ ಕಮಲಕ್ಕೆ ನೂರಾರು ಕೋಟಿ ಖರ್ಚು ಯಡಿಯೂರಪ್ಪ ಅವರ ಬಳಿ ಹಣವಿದೆ, ಆದ್ರೆ ಬಡಜನರ ಎರಡು ಹೊತ್ತಿನ ಊಟಕ್ಕೆ ಅಕ್ಕಿ ಕೊಡಲು ಹಣವಿಲ್ಲ. ಬಡವರ ಅನ್ನ ಕಸಿದ ಇಂಥ ಭಂಡ ಸರ್ಕಾರ ಬೇಕಾ? ಈ ಉಪಚುನಾವಣೆಯಲ್ಲಿ ಮತ ನೀಡುವ ಮುನ್ನ ಜನತೆ ಈ ವಿಚಾರ ನೆನಪು ಮಾಡಿಕೊಳ್ಳಬೇಕು. ಸ್ವಾರ್ಥ ಸೋಲಬೇಕು, ಪ್ರಜಾತಂತ್ರ ಗೆಲ್ಲಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.
ತನ್ನ ಸ್ವಾರ್ಥಸಾಧನೆ, ಅಕ್ರಮ ಆಸ್ತಿಯನ್ನು ರಕ್ಷಿಸಿಕೊಳ್ಳಲು ಆನಂದ್ ಸಿಂಗ್ ರಾಜಕೀಯದಲ್ಲಿ ಇದ್ದಾರೆ. ಜನಸೇವೆ ಮಾಡಲು ಅಲ್ಲ. ಇವರೆಲ್ಲ ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್ನವರು. ಎಲ್ಲ 15 ಅನರ್ಹ ಶಾಸಕರು ಇಂಥವರೆ. ಇವರು ಗೆದ್ದರೆ ಯಾರಿಗೂ ಪ್ರಯೋಜನವಿಲ್ಲ. ಇಂಥವರನ್ನು ಸೋಲಿಸಿ ದೇಶಕ್ಕೆ ಉತ್ತಮ ಸಂದೇಶ ರವಾನಿಸಬೇಕು ಎಂದು ಕ್ಷೇತ್ರದ ಮತದಾರರಲ್ಲಿ ಕೈಮುಗಿದು ಮನವಿ ಮಾಡುತ್ತೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

