Connect with us

ರಾಜಕೀಯ

ಅನರ್ಹ ಶಾಸಕರು ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್‌ನವರಂತೆ, ಇಂಥವರನ್ನು ಸೋಲಿಸಿ : ಸಿದ್ದರಾಮಯ್ಯ ಮನವಿ

Published

on

ಸುದ್ದಿದಿನ,ಹೊಸಪೇಟೆ : ಹೊಸಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರಿಗೆ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಹಿಂದೆ ಆನಂದ್ ಸಿಂಗ್ ನನ್ನ ಬಳಿ ಕಾಂಗ್ರೆಸ್ ಟಿಕೆಟ್ ಕೇಳಿದಾಗ ಏನಪ್ಪಾ ನಿನ್ನ ಹಿನ್ನೆಲೆ ಸರಿಯಿಲ್ಲ, ಅಕ್ರಮ‌ ಗಣಿಗಾರಿಕೆ ಕೇಸಲ್ಲಿ ಜೈಲಿಗೆ ಹೋಗಿ ಬಂದಿದೀಯ, ಇಷ್ಟೆಲ್ಲ ಸಮಸ್ಯೆ ಇದ್ರೆ ಹೇಗಪ್ಪ? ಅಂದೆ. ನಾನು ಇನ್ಮೇಲೆ ಯಾವ ಭ್ರಷ್ಟಾಚಾರವನ್ನೂ ಮಾಡಲ್ಲ, ಕಾಂಗ್ರೆಸ್‌ಗೆ ನಿಷ್ಠನಾಗಿರ್ತೀನಿ ಅಂತ ನನಗೆ ಮಾತು ಕೊಟ್ಟಿದ್ರು. ಆನಂದ್ ಸಿಂಗ್ ತನ್ನನ್ನು ಆಯ್ಕೆ ಮಾಡಿದ ಜನತೆಗೂ ಬೆಲೆ ಕೊಡದೆ ಪಕ್ಷಾಂತರ ಮಾಡಿ ಮತ್ತೆ ಚುನಾವಣೆ ಎದುರಾಗುವಂತೆ ಮಾಡಿದ್ದಾರೆ. ಯಾಕಪ್ಪ ಆನಂದ್ ಸಿಂಗ್ ನಾವೇನು ದ್ರೋಹ ಮಾಡಿದ್ವಿ ನಿಮ್ಗೆ? ಕ್ಷೇತ್ರದ ಜನತೆ ಮತ ನೀಡಿ ಗೆಲ್ಲಿಸಿದ್ದು ತಪ್ಪಾ? ಅಥವಾ ನಿಮ್ಮ ಮಾತನ್ನು ನಂಬಿ ಪಕ್ಷದ ಟಿಕೆಟ್ ಕೊಟ್ಟಿದ್ದು ತಪ್ಪಾ? ಎಂದು ಪ್ರಶ್ನಿಸಿದರು.

ಆನಂದ್ ಸಿಂಗ್ ಸೇರಿದಂತೆ 15 ಶಾಸಕರು ಪಕ್ಷಾಂತರ ಮಾಡಿರುವುದು ಸಾಬೀತಾಗಿರುವುದರಿಂದ ಸುಪ್ರೀಂ ಕೋರ್ಟ್ ಅವರನ್ನು ರಾಜಕೀಯದಲ್ಲಿ ಮುಂದುವರೆಯಲು ನಾಲಾಯಕ್ ಎಂದು ಹೇಳಿದೆ. ಈಗ ಜನತೆಯ ಸರದಿ, ಈ ಚುನಾವಣೆಯಲ್ಲಿ ಅನರ್ಹ ಶಾಸಕ ಆನಂದ್ ಸಿಂಗ್‌ರನ್ನು ತಿರಸ್ಕರಿಸಿ, ಶಾಶ್ವತವಾಗಿ ಮನೆಗೆ ಕಳುಹಿಸಿ, ಕೋರ್ಟ್ ತೀರ್ಪನ್ನು ಎತ್ತಿಹಿಡಿಯಬೇಕು. ಈ ಚುನಾವಣೆ ಇಲ್ಲಿನ ಮತದಾರರ ಸ್ವಾಭಿಮಾನದ ಪ್ರಶ್ನೆ. ಆನಂದ್ ಸಿಂಗ್ ಹೆಸರು ಈಗ ಅನರ್ಹ ಸಿಂಗ್ ಆಗಿದೆ. ಅವರಿಗೆ ಬಡವರ ಕಷ್ಟ ಗೊತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಕೇಳಲು ಬಿಡುವಿಲ್ಲ. ಚುನಾವಣೆಯಲ್ಲಿ ಗೆದ್ದಾಗಿನಿಂದ ಈವರೆಗೆ ಕ್ಷೇತ್ರಕ್ಕೇ ಬಂದಿಲ್ಲ. ಇಂಥ ವ್ಯಕ್ತಿ ಬೇಕೇ? ಅಥವಾ ಸರಳ ಸಜ್ಜನ ನಾಯಕ ಘೋರ್ಪಡೆಯವರು ಬೇಕೇ ಎಂದು ಯೋಚಿಸಬೇಕಿದೆ ಎಂದರು.

ಇದೇ ಆನಂದ್ ಸಿಂಗ್, ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ವಿರುದ್ಧ ವಿಧಾನಸಭೆಯಲ್ಲಿ ತೊಡೆತಟ್ಟಿ, ಅವರಿಗೆ ಸವಾಲು ಹಾಕಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದರ ಫಲ ಬಳ್ಳಾರಿಯ ಗಣಿಕಳ್ಳರೆಲ್ಲ ಜೈಲಿಗೆ ಹೋಗಿ ಬಂದಿದ್ದರು. ಇಂಥ ಲೂಟಿಕೋರರ ಕೈಗೆ ಮತ್ತೆ ಅಧಿಕಾರ ಸಿಗಬೇಕಾ? ನಾನು ಪ್ರಚಾರಕ್ಕೆಂದು ಹೋದ ಕಡೆಗಳಲ್ಲಿ ಸರ್ಕಾರ 4 ಕೆ.ಜಿ ಅಕ್ಕಿ ಕೊಡ್ತಿದೆ, ರಾಗಿ, ಗೋಧಿ ನಿಯಮಿತವಾಗಿ ಕೊಡ್ತಿಲ್ಲ ಎಂದು ಜನ ತಮ್ಮ ಕಷ್ಟ ಹೇಳಿಕೊಳ್ತಿದ್ದಾರೆ. ‘ಈ ಕಷ್ಟ ಇನ್ನು ಕೆಲವೇ ದಿನ ಮಾತ್ರ. ಉಪಚುನಾವಣೆ ಫಲಿತಾಂಶದ ನಂತರ ನಮ್ಮ‌ ಸರ್ಕಾರ ಬರುತ್ತೆ, ಆಗ ಮತ್ತೆ 10 ಕೆ.ಜಿ‌ ಅಕ್ಕಿ ಕೊಡ್ತೀವಿ’ ಅಂತ ಅವರಿಗೆ ಧೈರ್ಯ ಹೇಳಿದ್ದೀನಿ. ಆಪರೇಷನ್ ಕಮಲಕ್ಕೆ ನೂರಾರು ಕೋಟಿ ಖರ್ಚು ಯಡಿಯೂರಪ್ಪ ಅವರ ಬಳಿ ಹಣವಿದೆ, ಆದ್ರೆ ಬಡಜನರ ಎರಡು ಹೊತ್ತಿನ ಊಟಕ್ಕೆ ಅಕ್ಕಿ ಕೊಡಲು ಹಣವಿಲ್ಲ. ಬಡವರ ಅನ್ನ ಕಸಿದ ಇಂಥ ಭಂಡ ಸರ್ಕಾರ ಬೇಕಾ? ಈ ಉಪಚುನಾವಣೆಯಲ್ಲಿ ಮತ ನೀಡುವ ಮುನ್ನ ಜನತೆ ಈ ವಿಚಾರ ನೆನಪು ಮಾಡಿಕೊಳ್ಳಬೇಕು. ಸ್ವಾರ್ಥ ಸೋಲಬೇಕು, ಪ್ರಜಾತಂತ್ರ ಗೆಲ್ಲಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.

ತನ್ನ ಸ್ವಾರ್ಥಸಾಧನೆ, ಅಕ್ರಮ ಆಸ್ತಿಯನ್ನು ರಕ್ಷಿಸಿಕೊಳ್ಳಲು ಆನಂದ್ ಸಿಂಗ್ ರಾಜಕೀಯದಲ್ಲಿ ಇದ್ದಾರೆ. ಜನಸೇವೆ ಮಾಡಲು ಅಲ್ಲ. ಇವರೆಲ್ಲ ಜನಸಾಮಾನ್ಯರ ರಕ್ತ ಹೀರುವ ಮಾಫಿಯಾ ಗ್ಯಾಂಗ್‌ನವರು. ಎಲ್ಲ 15 ಅನರ್ಹ ಶಾಸಕರು ಇಂಥವರೆ. ಇವರು ಗೆದ್ದರೆ ಯಾರಿಗೂ ಪ್ರಯೋಜನವಿಲ್ಲ. ಇಂಥವರನ್ನು ಸೋಲಿಸಿ ದೇಶಕ್ಕೆ ಉತ್ತಮ ಸಂದೇಶ ರವಾನಿಸಬೇಕು ಎಂದು ಕ್ಷೇತ್ರದ ಮತದಾರರಲ್ಲಿ ಕೈಮುಗಿದು ಮನವಿ ಮಾಡುತ್ತೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರೈತನಿಗೆ ಅವಮಾನ ; ಜಿ.ಟಿ ಮಾಲ್ ಬಂದ್..!

Published

on

ಸುದ್ದಿದಿನಡೆಸ್ಕ್:ಪಂಚೆ ತೊಟ್ಟು ಬಂದ ರೈತನಿಗೆ ಜಿ.ಟಿ ಮಾಲ್​ ಸಿಬ್ಬಂದಿ ಪ್ರವೇಶ ನಿರಾಕರಿಸಿದ ಘಟನೆ ಇಂದು ಸದನದಲ್ಲಿ ಪ್ರತಿಧ್ವನಿಸಿದೆ. ಸದನಕ್ಕೆ ಪಂಚೆಯುಟ್ಟು ಬಂದ ಶಾಸಕ ಶರಣಗೌಡ ಕಂದಕೂರ ಜಿಟಿ ಮಾಲ್‌ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಹಲವು ಶಾಸಕರು ಘಟನೆಯನ್ನ ಖಂಡಿಸಿದ್ದಾರೆ. ಈ ಹಿನ್ನೆಲೆ ರೈತನಿಗೆ ಅಪಮಾನ ಮಾಡಿದ ಜಿ.ಟಿ ಮಾಲ್​ಗೆ ಸರ್ಕಾರ ತಕ್ಕಪಾಠ ಕಲಿಸಲು ಮುಂದಾಗಿದೆ. ರೈತನಿಗೆ ಅಪಮಾನ ಮಾಡಿದ ಜಿ.ಟಿ. ಮಾಲ್ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ. 7 ದಿನಗಳ ಕಾಲ ಮಾಲ್​ ಕ್ಲೋಸ್ ಮಾಡಲು ಬಿಬಿಎಂಪಿ ಮುಂದಾಗಲಿದೆ.

ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ನಾಗರಾಜ್​ ತಮ್ಮ ತಂದೆ ತಾಯಿ ಜೊತೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರೋ ಜಿ.ಟಿ. ಮಾಲ್‌ಗೆ ಸಿನಿಮಾ ನೋಡೋಕೆ ಬಂದಿದ್ರು. ಹೀಗೆ ಮಾಲ್‌ ಒಳಗೆ ಎಂಟ್ರಿ ಕೊಡ್ತಿದ್ದಂತೆ ಸೆಕ್ಯೂರಿಟಿ ಸಿಬ್ಬಂದಿ ನಾಗರಾಜ್ ತಂದೆ ಪಂಚೆ ತೊಟ್ಟಿದ್ದಾರೆ. ಮಾಲ್‌ನ ಒಳಗೆ ಪಂಚೆ ತೊಟ್ಟವರಿಗೆ ಪ್ರವೇಶವಿಲ್ಲ ಅಂತ ಅಲ್ಲೇ ತಡೆದಿದ್ದಾರೆ.

ಇದನ್ನ ಪ್ರಶ್ನಿಸಿದ ಬಳಿಕ ಎಂಟ್ರಿ ಕೊಟ್ಟ ಮಾಲ್ ಮ್ಯಾನೇಜರ್‌ ಕೂಡಾ ಅದೇ ರಾಗಾ ತೆಗೆದಿದ್ದರು. ಅಷ್ಟೇ ಅಲ್ಲ. ಸುಮಾರು ಅರ್ಧ ಗಂಟೆಗಳ ಕಾಲ ಮಾಲ್ ಒಳಗೆ ಬಿಡದೇ ಸಿಬ್ಬಂದಿ ಸತಾಯಿಸಿದ್ದಾರೆ. ಸಿನಿಮಾ ವೀಕ್ಷಣೆಗೆ ಹೋಗಲೂ ಬಿಡದೇ ಗೇಟ್ ಬಳಿಯೇ ಕೂರಿಸಿ ಅವಮಾನ ಮಾಡಿದ್ದಾರೆ. ಇದನ್ನೆಲ್ಲಾ ಕಂಡು ವೃದ್ಧನ ಪುತ್ರ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದರು. ಮಾಲ್‌ ಸಿಬ್ಬಂದಿ ತೋರಿದ ದರ್ಪವನ್ನೆಲ್ಲಾ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದ್ದರು.

ಈ ಬಗ್ಗೆ ಕನ್ನಡ ಪರ ಹೋರಾಟಗಾರರು ಜಿಟಿ ಮಾಲ್‌ಗೆ ಸರಿಯಾಗಿ ಬಿಸಿಮುಟ್ಟಿಸಿದ್ದಾರೆ. ಕನ್ನಡ ಹೋರಾಟಗಾರರ ಪ್ರತಿಭಟನೆಗೆ ಥಂಡಾ ಹೊಡೆದ ಜಿಟಿ ಮಾಲ್‌ ಸಿಬ್ಬಂದಿ ನಂತರ ರೈತನನ್ನು ಕರೆಸಿ ಸನ್ಮಾನ ಮಾಡಿದ್ದಾರೆ. ಬೆಂಗಳೂರಿನ ಜಿಟಿ ಮಾಲ್​ಗೆ ರೈತ ಫಕೀರಪ್ಪ ಪಂಚೆ ಧರಿಸಿಕೊಂಡು ಬಂದು ಸನ್ಮಾನ ಸ್ವೀಕರಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆಎಸ್‌ಆರ್‌ಟಿಸಿ | 300 ಹೊಸ ಬಸ್ ಖರೀದಿಗೆ ಸರ್ಕಾರ ನಿರ್ಧಾರ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಈಗಾಗಲೇ 375ಬಸ್ ಗಳನ್ನು ಖರೀದಿ ಮಾಡಲಾಗಿದೆ. ಮತ್ತೆ 300 ಹೊಸ ಬಸ್ ಗಳನ್ನ ಖರೀದಿ ಮಾಡಲಾಗುವುದು ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಬಸ್ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಸರಕಾರದ ಗಮನಕ್ಕೂ ತರಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ನಗರಕ್ಕಿಂತ ಹಳ್ಳಿಗಳಿಗೆ ಸಾರಿಗೆ ವ್ಯವಸ್ಥೆಯ ಅನುಕೂಲ ಮಾಡಲಾಗುವುದು. ಕಾನೂನು ಪ್ರಕಾರ ಹತ್ತು ಲಕ್ಷ ಕಿಲೋಮೀಟರ್ ಚಲಿಸಿದ ಬಸ್ ಗಳ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜನಸಂಖ್ಯೆ ನಿಯಂತ್ರಣ ; ಗರ್ಭ ನಿರೋಧಕ ಅಳವಡಿಕೆಯಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ

Published

on

ಸುದ್ದಿದಿನಡೆಸ್ಕ್:ಜನಸಂಖ್ಯೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸಿರುವ ಗರ್ಭ ನಿರೋಧಕ ಅಳವಡಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆಯ ಒಡಂಬಡಿಕೆಯೊಂದಿಗೆ ಪ್ರಾಯೋಗಿಕವಾಗಿ ರಾಜ್ಯದ 4 ಜಿಲ್ಲೆಗಳನ್ನು ಗರ್ಭ ನಿರೋಧಕ ಅಳವಡಿಕೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ಎಲ್ಲ ಜಿಲ್ಲೆಗಳ ಯೋಜನೆ ಸಂಪೂರ್ಣ ಯಶಸ್ವಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಡಬ್ಲ್ಯುಎಚ್‌ಒ ಒಡಂಬಡಿಕೆ ಯೊಂದಿಗೆ 6 ಜಿಲ್ಲೆಗಳಿಗೆ ಯೋಜನೆ ವಿಸ್ತರಣೆಯಾಗಲಿದೆ ಎಂದರು.

ಚಿತ್ರದುರ್ಗದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಜನಸಂಖ್ಯಾ ಸ್ಫೋಟದಿಂದ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರಲಿದೆ ಎಂದು ಹೇಳಿದರು. ಜನಸಂಖ್ಯೆ ನಿಯಂತ್ರಣದಿಂದ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧಿಸಬಹುದು ಎಂದು ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿ ಪಾಟೀಲ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending