Connect with us

ರಾಜಕೀಯ

ವಾರಕ್ಕೆ ಎರಡು ಮೂರು ಸಾರಿಯಾದ್ರೂ ಬೇಕು ನಾಟಿಕೋಳಿ ಸಾರು, ಮುದ್ದೆ : ಸಿದ್ದರಾಮಯ್ಯ

Published

on

ರಾಜಕಾರಣದಲ್ಲಿ ಇರೋರಿಗೆ ಯಾರು ವೈರಿಗಳೂ ಅಲ್ಲ ಮಿತ್ರರೂ ಅಲ್ಲ. ಆರೋಗ್ಯ ವಿಚಾರಿಸಲು ಬಂದವರಿಗೆ ಧನ್ಯವಾದ ಹೇಳಿದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಸಿದ್ದರಾಮಯ್ಯರ ಮಾತು.

ಸುದ್ದಿದಿನ ,ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯನವರ ಆಹಾರ ಪದ್ಧತಿಯೇ ಒಂಥರಾ ಡಿಫರೆಂಟ್. ರಾಜಕಾರಣಕ್ಕೆ ಬಂದ ಮೇಲೂ ಸಿದ್ದರಾಮಯ್ಯನವರು ಅದನ್ನ ಮಿಸ್ ಮಾಡಿಕೊಳ್ಳುತ್ತಿರಲಿಲ್ಲ. ಮುದ್ದೆ, ನಾಟಿ ಕೋಳಿ ಸಾರು ಅಂದ್ರೆ ಪಂಚಪ್ರಾಣ. ರಾಜಕಾರಣಿಗಳಿಗೆ ಟೈಮ್ ಇರಲ್ಲ. ಕೆಲವರದಂತೂ ಕಟ್ಟುನಿಟ್ಟಿನ ಜೀವನ ಶೈಲಿ ಆಗಿರುತ್ತೆ. ಆದರೆ ಆಹಾರ ವಿಚಾರದಲ್ಲಿ ಸಿದ್ದರಾಮಯ್ಯ ಶಿಸ್ತಿಗೆ ಬಂದಿದ್ದಾರಂತೆ.

ಸಿಎಂ ಆದ ಬಳಿಕವಂತೂ ಪಕ್ಕಾ ಫುಡ್ ಕಲ್ಚರ್ ಗೆ ಹೊಂದಿಕೊಂಡಿದ್ದಾರೆ. ಮುದ್ದೆ ನಾಟಿ ಕೋಳಿ ಸಾರು ಮಾತ್ರ ಬೇಕೇ ಬೇಕು. ವಾರಕ್ಕೆ ಕನಿಷ್ಠ ಎರಡ್ಮೂರು ಬಾರಿಯಾದರೂ ನಾಟಿಕೋಳಿ ಸಾರು ಇಲ್ಲದಿದ್ದರೆ ರುಚಿಯ ಗಮ್ಮತ್ತೇ ಇರಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ ಎಂಬುವುದು ಆಪ್ತರ ಮಾತು.

ಅಂದಹಾಗೆ ಇದನ್ನೆಲ್ಲ ಈಗ ಏಕೆ ಹೇಳ್ತಿದ್ದೀರಾ ನೀವು ಅಂತಾ ಅಶ್ಚರ್ಯ ತರಬಹುದು. ಅದಕ್ಕೆ ಕಾರಣ ಇದೆ. ಸಿದ್ದರಾಮಯ್ಯ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ಬಳಿಕ ಆಸ್ಪತ್ರೆಯಲ್ಲಿದ್ದರು. 5 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದಾಗಲೂ ಅವರು ನಾಟಿಕೋಳಿ ಸಾರನ್ನ ಮಾತ್ರ ಮರೆಯಲಿಲ್ಲ. ಆಸ್ಪತ್ರೆಯಲ್ಲಿ ಮೆಡಿಸಿನ್ ತೆಗೆದುಕೊಳ್ಳುತ್ತಾ ಇದ್ದಿದ್ರಿಂದ ಬಾಯಿ ರುಚಿ ಸ್ವಲ್ಪ ಕೆಡುತ್ತೆ. ಈ ನಡುವೆಯೇ ನಾಟಿಕೋಳಿ ಸಾರನ್ನ ತರಿಸಿಕೊಂಡು ಊಟ ಮಾಡುತ್ತಿದ್ದರು ಅಂತಾ ಆಪ್ತರು ಹೇಳುತ್ತಾರೆ.

ಸಿದ್ದರಾಮಯ್ಯನವರ ನಾಟಿಕೋಳಿ ಪ್ರೀತಿ ಹೇಗಿದೆ ಅನ್ನೋದನ್ನ ಅವರ ಒಂದು ಪ್ರಶ್ನೆಯಲ್ಲೇ ಗೊತ್ತಾಗುತ್ತೆ ನೋಡಿ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಡುವ ಮೊದಲು ಏನ್ರೀ ಡಾಕ್ಟರೇ, ಮನೆಗೆ ಹೋದ ಮೇಲೂ ನಾಟಿಕೋಳಿ ಸಾರು ಊಟ ಮಾಡಬಹುದಾ? ಏನು ಪ್ರಾಬ್ಲಂ ಇಲ್ವಾ? ಎಂದು ಸಿದ್ದರಾಮಯ್ಯನವರು ಕೇಳಿದ್ದಾರೆ ಎನ್ನಲಾಗಿದೆ.

ಆಗ ಡಾಕ್ಟರ್ ನಾಟಿಕೋಳಿ ಸಾರು ಏನು ಪ್ರಾಬ್ಲಂ ಇಲ್ಲ, ಊಟ ಮಾಡಿ ಆದರೆ ಪ್ರವಾಸ ಹೋಗಬೇಡಿ. ಕನಿಷ್ಠ 10 ದಿನ ನೀವು ವಿಶ್ರಾಂತಿಯಲ್ಲಿರಬೇಕು, ಬೆಳಗ್ಗೆ ಮತ್ತು ಸಂಜೆ ವಾಕಿಂಗ್, ಜಾಗಿಂಗ್ ಮಾಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ನಿಮ್ಮ ಸಲಹೆಯಂತೆ ವಿಶ್ರಾಂತಿ ಪಡೆದುಕೊಂಡು ಆರೋಗ್ಯವಾಗಿರುತ್ತೇನೆ ಎಂದು ಹೇಳಿ ಸಿದ್ದರಾಮಯ್ಯನವರು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಬರುವಾಗ ತಮ್ಮನ್ನು ನೋಡಿಕೊಂಡ ಆಸ್ಪತ್ರೆಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿ ಬಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Advertisement

ರಾಜಕೀಯ

ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

Published

on

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.

ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ರಾಜಕೀಯ

ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.

29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ರಾಜಕೀಯ

ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

Published

on

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ‌ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ‌ಚುನಾವಣೆಯಲ್ಲಿ‌ ಮತದಾನ ನಡೆಯಿತು.

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.

ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಈ‌ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending