Connect with us

ರಾಜಕೀಯ

ದೇಶ ಪ್ರೇಮದ ಹೆಸರಿನಲ್ಲಿ ಅಮಾಯಕರ ಹತ್ಯೆಗೆ ಮೋದಿ‌ ಸರ್ಕಾರದ ಬೆಂಬಲ : ಸಿದ್ದರಾಮಯ್ಯ ಆಕ್ರೋಶ

Published

on

ಸುದ್ದಿದಿನ, ಚಿಕ್ಕಮಗಳೂರು : ರಾಜ್ಯಪಾಲರ ಭಾಷಣ ನಾಡಿನ ಮತ್ತು ಜನತೆಯ ಹಿತಾಸಕ್ತಿಯ ಪರವಾಗಿ ಇದ್ದರೆ ನಾವು ಪ್ರತಿಭಟಿಸುವಂತಹ ಪ್ರಮೇಯವೇ ಬರುವುದಿಲ್ಲ. ಭಾಷಣದಲ್ಲಿ ಆಕ್ಷೇಪಾರ್ಹ ವಿಚಾರಗಳು ಇದ್ದರೆ ಖಂಡಿತಾ ವಿರೋಧಿಸುತ್ತೇವೆ, ಆಗ ನಮ್ಮ ಬಾಯಿ ಮುಚ್ಚಿಸೋಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಟಿಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಚಿಕ್ಕಮಗಳೂರುನಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಜಿ‌ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ ಅವರು, ಕಳೆದ ಬಾರಿ ಕೇಂದ್ರದ ಬಜೆಟ್ ಗಾತ್ರ ರೂ.27 ಲಕ್ಷ ಕೋಟಿಯಾಗಿತ್ತು, ಅದರಲ್ಲಿ ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಹಣ ಖರ್ಚಾಗಿದೆ ಎಂಬುದು ನಾಳೆ ತಿಳಿಯುತ್ತೆ. 6 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಪ್ರಧಾನಿ ಮೋದಿಯವರು ನೀಡಿದ ಭರವಸೆ ಎಲ್ಲವೂ ಈಡೇರಿದ್ದರೆ ಈಗಾಗಲೇ ಸ್ವರ್ಗ ಸೃಷ್ಟಿಯಾಗಿರಬೇಕಿತ್ತು.

ಬಿಜೆಪಿಯವರು ಸ್ವರ್ಗ ಸೃಷ್ಟಿ ಮಾಡ್ತೀವಿ ಅಂತ ಹೇಳಿ ದೇಶವನ್ನು ನರಕ ಮಾಡಿದ್ದಾರೆ. ದೇಶದ ನಿರುದ್ಯೋಗ ಸಮಸ್ಯೆ, ಹಸಿವು, ಜಿಡಿಪಿ ಕುಸಿತ, ಭ್ರಷ್ಟಾಚಾರದ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಉತ್ಪಾದನೆ ಕುಸಿತ, ಇಳಿಕೆಯಾಗುತ್ತಿರುವ ರಫ್ತು ಪ್ರಮಾಣದ ಬಗ್ಗೆ ಮಾತನಾಡಲಿ. ದೇಶದ ಈ ದುಸ್ಥಿತಿಗೆ ಕಾರಣ ಯಾರು? ಎಂದು ಕಿಡಿ ವ್ಯಕ್ತಪಡಿಸಿದರು. ‌

‘ಈಶ್ವರ್ ಅಲ್ಲಾ ತೇರೆ ನಾಮ್
ಸಬ್‌ಕೋ ಸನ್ಮತಿ ದೇ ಭಗವಾನ್’ ಎಂದು ಸೌಹಾರ್ದತೆ ಸಾರಿದ ಕಾರಣಕ್ಕಾಗಿ ಮಹಾತ್ಮ ಗಾಂಧಿಯವರನ್ನು ಸಂಘಪರಿವಾರ ಗುಂಡಿಟ್ಟು ಕೊಂದಿತ್ತು. ಈಗ ಅದೇ ಸಂಘಟನೆಗೆ ಸೇರಿದ ಗೂಂಡಾ ಒಬ್ಬ ಜಾಮಿಯಾ ವಿಶ್ವವಿದ್ಯಾಲಯದ ಮೌನ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾನೆ.

ಸೌಹಾರ್ದತೆ ಎಂದರೆ ಬಿಜೆಪಿಗೆ ಏಕಿಷ್ಟು ಭಯ? ಮಹಾತ್ಮ ಗಾಂಧಿಯವರ ಸಮಾಧಿಸ್ಥಳ ರಾಜ್‌ಘಾಟ್‌ಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕಣ್ಣೆದುರೇ ಗೂಂಡಾ ಒಬ್ಬ ಗುಂಡು ಹಾರಿಸಿದ್ರೂ ಪೊಲೀಸರು ಮೌನವಾಗಿದ್ರು. ಗೂಂಡಾವೊಬ್ಬನಿಗೆ ಇಷ್ಟು ಧೈರ್ಯ ಬರಲು ಹೇಗೆ ಸಾಧ್ಯ? ಇದಕ್ಕೆ ಯಾರ ಬೆಂಬಲವಿದೆ? ಎಂಬುದರ ಬಗ್ಗೆ ಮೊದಲು ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ದೇಶ ವಿನಾಶದತ್ತ ಸಾಗುತ್ತಿದೆ. ಸಮಾಜಘಾತುಕರು, ಗೂಂಡಾಗಳೆಲ್ಲ ದೇಶಪ್ರೇಮದ ಸೋಗಿನಲ್ಲಿ ಅಮಾಯಕರ ಹತ್ಯೆಗೆ ನಿಂತಿದ್ದಾರೆ. ಇಂಥ ಹತ್ಯೆಗಳಿಗೆ ಸರ್ಕಾರವೂ ಬೆಂಬಲಿಸುತ್ತಿರುವುದು ದೇಶದ ಕರಾಳ ದಿನಗಳನ್ನು ಖಾತ್ರಿಪಡಿಸುತ್ತಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಕೆ? ಎಂದು‌ ಬಿಜೆಪಿ ಸರ್ಕಾವನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

Published

on

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.

ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

Published

on

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending