ರಾಜಕೀಯ
ಸಗಣಿ ಎತ್ತೋರು ನಿಜವಾದ ರೈತರು ; ತುಪ್ಪ ತಿನ್ನೋರು ಗೋಮಾತೆ ಹೆಸರಲ್ಲಿ ರಾಜಕೀಯ ಮಾಡೋರು : ಸಿದ್ದರಾಮಯ್ಯ ಕಿಡಿ
ಸುದ್ದಿದಿನ,ಬಳ್ಳಾರಿ : ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಾಲುವೆ ಗ್ರಾಮದಲ್ಲಿ ನಡೆದ ಶ್ರೀ ಬೀರಲಿಂಗೇಶ್ವರ ದೇವಾಲಯದ ಉದ್ಘಾಟನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು,
‘ಗೋಮಾತೆಯ ನಿಜವಾದ ಸೇವಕರು ರೈತರು. ರೈತರು ಸಗಣಿ ಮಾತ್ರ ಎತ್ತುತ್ತಾರೆ, ತುಪ್ಪ ತಿನ್ನುವವರು ಮಾತ್ರ ಗೋಮಾತೆ ಹೆಸರು ಹೇಳಿಕೊಂಡು ರಾಜಕಾರಣ ಮಾಡುವವರು ಎಂದು ಕಿಡಿಕಾರಿದರು.
ಜಾತಿ ವ್ಯವಸ್ಥೆಯ ಬಗ್ಗೆ ಅವಮಾನ ಅನುಭವಿಸಿದ್ದ ಬಸವಣ್ಣ, ಕನಕ, ಅಂಬೇಡ್ಕರ್ ಅವರಂತಹ ಮಹಾಪುರುಷರು ಹೊಸ ಸಮಾಜದ ಕನಸು ಕಂಡಿದ್ದರು. ಶರಣರು, ಮಹಾತ್ಮರು ಬೋಧಿಸಿದ ತತ್ವಗಳ ಅಡಿಯಲ್ಲೇ ನಮ್ಮ ಸಂವಿಧಾನ ರೂಪುಗೊಂಡಿದೆ ಎಂದರು.
ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಾಲುವೆ ಗ್ರಾಮದಲ್ಲಿ ನಡೆದ ಶ್ರೀ ಬೀರಲಿಂಗೇಶ್ವರ ದೇವಾಲಯದ ಉದ್ಘಾಟನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. pic.twitter.com/WX6xPlkn7t
— Siddaramaiah (@siddaramaiah) November 22, 2018
‘ಗೋಮಾತೆಯ ನಿಜವಾದ ಸೇವಕರು ರೈತರು. ರೈತರು ಸಗಣಿ ಮಾತ್ರ ಎತ್ತುತ್ತಾರೆ, ತುಪ್ಪ ತಿನ್ನುವವರು ಮಾತ್ರ ಗೋಮಾತೆ ಹೆಸರು ಹೇಳಿಕೊಂಡು ರಾಜಕಾರಣ ಮಾಡುವವರು’ #ಬೀರಲಿಂಗೇಶ್ವರದೇವಸ್ಥಾನಉದ್ಘಾಟನೆ
— Siddaramaiah (@siddaramaiah) November 22, 2018
ಜಾತಿ ವ್ಯವಸ್ಥೆಯ ಬಗ್ಗೆ ಅವಮಾನ ಅನುಭವಿಸಿದ್ದ ಬಸವಣ್ಣ, ಕನಕ, ಅಂಬೇಡ್ಕರ್ ಅವರಂತಹ ಮಹಾಪುರುಷರು ಹೊಸ ಸಮಾಜದ ಕನಸು ಕಂಡಿದ್ದರು. ಶರಣರು, ಮಹಾತ್ಮರು ಬೋಧಿಸಿದ ತತ್ವಗಳ ಅಡಿಯಲ್ಲೇ ನಮ್ಮ ಸಂವಿಧಾನ ರೂಪುಗೊಂಡಿದೆ.#ಬೀರಲಿಂಗೇಶ್ವರದೇವಸ್ಥಾನಉದ್ಘಾಟನೆ
— Siddaramaiah (@siddaramaiah) November 22, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು