ದಿನದ ಸುದ್ದಿ

ನಾನು ಬಿಜೆಪಿ ನಾಯಕರಿಗಿಂತ ಒಳ್ಳೆಯ ಹಿಂದು : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು. ಏನಿವಾಗ?

ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ‌ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ ಬಿಜೆಪಿ ಪಕ್ಷದ ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದರ ನಂತರ ಕುಂಕುಮ,ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ.

ಉತ್ತರ ಪ್ರದೇಶದಲ್ಲೊಬ್ಬರು ಬಿಜೆಪಿಯ ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖದ ತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ. ಆದರೆ ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್‌ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ?
ನಾನು ಬಿಜೆಪಿ ನಾಯಕರಿಗಿಂತ ಒಳ್ಳೆಯ ಹಿಂದು.
ನಾನೆಂದೂ ಅವರಂತೆ ತಿಲಕ,ಕಾವಿ, ಧರ್ಮಗಳನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿಲ್ಲ. ನನ್ನದು ಜನಪರ ರಾಜಕಾರಣ, ದೇವರು, ಧರ್ಮ ಎಲ್ಲ ನನ್ನ ಮನೆಯೊಳಗಿನ ನಂಬಿಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version