Connect with us

ದಿನದ ಸುದ್ದಿ

ನಿಷೇಧಾಜ್ಞೆ ಹಿನ್ನೆಲೆ | ಯಡಿಯೂರಪ್ಪ ಅವರೇ, ಪಕ್ಷದ ಗುಲಾಮರಾಗಬೇಡಿ, ಆತ್ಮಸಾಕ್ಷಿಗೆ ಕಿವಿಕೊಡಿ : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಬೆಂಗಳೂರು : ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು.ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ ನೀವು ಕನ್ನಡಿಗರನ್ನು ಅವಮಾನಿಸಿದ್ದೀರಿ‌ ಎಂದು ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸದ ನಿಮ್ಮ ಪಕ್ಷಕ್ಕೆ ದೇಶದಲ್ಲಿ ನಡೆದ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿದಿರಲಾರದು. ಗಾಂಧಿ, ನೆಹರೂ ಮತ್ತು ಪಟೇಲ್ ಸೇರಿದಂತೆ ಎಲ್ಲರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು. ಹೋರಾಟದ ಪರಂಪರೆಗೆ ತಡೆಯೊಡ್ಡಬೇಡಿ. ಪ್ರತಿಭಟನೆ,
ಪ್ರತಿರೋಧ, ಚಳುವಳಿಗಳೆಲ್ಲ ಆರೋಗ್ಯಪೂರ್ಣ ಪ್ರಜಾಪ್ರಭುತ್ವದ ಲಕ್ಷಣಗಳು. ಭಿನ್ನಮತದ ಅಭಿವ್ಯಕ್ತಿಯ ಕೊರಳು ಹಿಚುಕಲು ಹೊರಡುವುದು ಸರ್ವಾಧಿಕಾರಿ ಧೋರಣೆ. ಇದು ಹಿಟ್ಲರನ ಜರ್ಮನಿ ಅಲ್ಲ, ಗಾಂಧೀಜಿಯವರ ಭಾರತ. ಮಾನ್ಯ ಯಡಿಯೂರಪ್ಪ ಅವರೇ, ನೀವು ಪಕ್ಷದ ಗುಲಾಮರಾಗಬೇಡಿ, ಆತ್ಮಸಾಕ್ಷಿಗೆ ಕಿವಿಕೊಡಿ ಎಂದು ಕೆಂಡಾಮಂಡಲವಾಗಿದ್ದಾರೆ.

ನಿಮ್ಮ ಪೌರತ್ವ ತಿದ್ದುಪಡಿ ಕಾಯ್ದೆಯ ಜನಹಿತದ ಬಗ್ಗೆ ಅಷ್ಟೊಂದು ಭರವಸೆ ಇದ್ದಿದ್ದರೆ ಪ್ರತಿಭಟನೆಗೆ ಯಾಕೆ ಹೆದರುತ್ತಿದ್ದೀರಿ, ನರೇಂದ್ರ ಮೋದಿ ಅವರೇ? ಜನಾಭಿಪ್ರಾಯ ಆಲಿಸಿ, ಅವರಿಗೆ ಮನವರಿಕೆ ಮಾಡಿಕೊಡಿ. ದಂಡಪ್ರಯೋಗ ಮನುಷ್ಯನ ದೌರ್ಬಲ್ಯ. ನಿಮ್ಮ ವರ್ತನೆಯೇ ನಿಮ್ಮ ದುಷ್ಟ ಆಲೋಚನೆಗೆ ಸಾಕ್ಷಿ.
ಕಾರ್ಯಾಂಗದ ಮುಖ್ಯ ಭಾಗವಾಗಿರುವ ಪೊಲೀಸರೇ, ನೀವು ಸರ್ಕಾರಿ ನೌಕರರಾಗಿದ್ದರೂ ಮೊದಲು ಮನುಷ್ಯರು ಎಂದು ಹೇಳಿದ್ದಾರೆ.

ಕರ್ನಾಟಕದ ಪೊಲೀಸರಿಗೆ ಅವರದ್ದೇ ಆಗಿರುವ ಹಿರಿಮೆ-ಗರಿಮೆಗಳಿವೆ. ನಿಮಗೆ ದೆಹಲಿ ಪೊಲೀಸರು ಆದರ್ಶವಾಗುವುದು ಬೇಡ, ಅವರ ಸ್ಪೂರ್ತಿಯಿಂದ ಕೆಲಸ ಮಾಡಿದರೆ ಕರ್ನಾಟಕದ ಜನತೆ ನಿಮ್ಮನ್ನು ಕ್ಷಮಿಸಲಾರರು ಎಂದು ನುಡಿದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending