Connect with us

ದಿನದ ಸುದ್ದಿ

20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ‘ಕನ್ನಡಿಯೊಳಗಿನ ಗಂಟು’; ‘ಹಳೆಯ ಸರಕಿಗೆ ಹೊಸ ಹೊದಿಕೆ’ : ಸಿದ್ದರಾಮಯ್ಯ ಟೀಕೆ

Published

on

ಸುದ್ದಿದಿನ, ಬೆಂಗಳೂರು : ಬಹುಪ್ರಚಾರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ ರೂ.20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಟಿವಿ ಪರದೆಯಲ್ಲಿ, ಪತ್ರಿಕೆಯ ಪುಟದಲ್ಲಿ ಕಾಣುತ್ತಿದೆ, ಜನರ ಕೈಗೆ ಸಿಗುತ್ತಿಲ್ಲ. ನಿರ್ಮಲಾ ಸೀತರಾಮನ್ ಅವರು 5 ಕಂತುಗಳಲ್ಲಿ ಬಿಚ್ಚಿಟ್ಟ ಪ್ಯಾಕೇಜ್ ಅಂಕಿ ಅಂಶಗಳ ಕಸರತ್ತು ‘ಹಳೆಯ ಸರಕಿಗೆ ಹೊಸ ಹೊದಿಕೆ’ ಎಂದು ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಬೆಂಗಳೂರಿನಲ್ಲಿ ‌ಮಾತನಾಡಿದ ಅವರು, ಕೊರೊನಾ ಹಾವಳಿಯಿಂದ ದೇಶ ಅತ್ಯಂತ ದೊಡ್ಡ ಮಾನವೀಯತೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಲಕ್ಷಾಂತರ ವಲಸೆ ಕಾರ್ಮಿಕರು, ಮಹಿಳೆಯರು, ಮಕ್ಕಳು ಊರು ಸೇರಲು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಜನರ ಪ್ರಸ್ತಾವವೇ ಇಲ್ಲದ ಪ್ಯಾಕೇಜ್ ‘ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ’ ಅಷ್ಟೆ. ಜನರ ಜೇಬಿಗೆ ದುಡ್ಡು ಹಾಕಿ ಎಂದು ನೊಬೆಲ್ ಪ್ರಶಸ್ತಿ ವಿಜೇತ ವಿದ್ವಾಂಸರು, ಪ್ರಖ್ಯಾತ ಆರ್ಥಿಕ ತಜ್ಞರು ಹೇಳುತ್ತಿದ್ದರೆ, ನರೇಂದ್ರ ಮೋದಿ ಅವರು ಖಾಲಿಯಾಗಿರುವ ಸರ್ಕಾರದ ಜೇಬು ತುಂಬಲು ಹೊರಟಿದ್ದಾರೆ. ಇದರಿಂದ ಬಡವರಿಗೆ, ಹಸಿದ ಹೊಟ್ಟೆಗಳಿಗೆ, ಕಾರ್ಮಿಕರಿಗೆ, ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ಸಿಕ್ಕಿದೆಷ್ಟು? ಎಂದು ಪ್ರಶ್ನಿಸಿದರು.

ದೇಶದಲ್ಲಿ ಗುರುತಿಸಲಾದ 13 ಕೋಟಿ ಬಡವರಿಗೆ ಮಾಸಿಕ ರೂ.5000 ನೀಡಿದರೆ ಆಗುವ ವೆಚ್ಚ ರೂ.65,000 ಕೋಟಿ. ರೂ.7000 ನೀಡಿದರೆ ಆಗುವ ವೆಚ್ಚ 97,500 ಕೋಟಿ. ಇಷ್ಟು ಕೊಟ್ಟು ಪುಣ್ಯ ಕಟ್ಕೊಳ್ಳಿ ಎಂದು ನಮ್ಮ ಪಕ್ಷ ಹೇಳುತ್ತಲೇ ಇದೆ. ಇಷ್ಟನ್ನೂ ನೀಡಲು ಸಾಧ್ಯ ಇಲ್ಲದಷ್ಟು‌ ಸರ್ಕಾರ ದಿವಾಳಿ‌ ಆಗಿದೆಯೇ? ನರೇಗಾ ಯೋಜನೆಯ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ ಮತ್ತು ಈ ಯೋಜನೆಯನ್ನು ನಗರ ಪ್ರದೇಶದ ಬಡವರಿಗೂ ವಿಸ್ತರಿಸಿ ಎಂದು ಪ್ರಾರಂಭದಿಂದಲೇ ನಮ್ಮ ಪಕ್ಷ ಹೇಳುತ್ತಲೇ ಬಂದಿದೆ. ಲಕ್ಷ ಕೋಟಿಗಳ ಪ್ಯಾಕೇಜ್ ನಲ್ಲಿ ಇದರ ಪ್ರಸ್ತಾವವೇ ಇಲ್ಲ ಎಂದು ಹೇಳಿದರು.

ಮುಂಗಾರು ಬೆಳೆಯ ಸಿದ್ದತೆಯಲ್ಲಿರುವ ರೈತರು ಈಗಾಗಲೇ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿದ್ದಾರೆ. ಅವರ ಹಳೆ ಸಾಲ ಮನ್ನಾ ಮಾಡಿ, ರಸಗೊಬ್ಬರ, ಕ್ರಿಮಿನಾಶಕ ಮತ್ತು ಕೃಷಿ ಸಲಕರಣೆಗಳ ಮೇಲಿನ ಜಿಎಸ್ ಟಿ ರದ್ದುಪಡಿಸಿ ಎಂಬ ಬೇಡಿಕೆ ಬಗ್ಗೆ ಪ್ರಧಾನಿಗಳು ಮೌನವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ನೆರವಿನ ಪ್ಯಾಕೇಜ್ ಮೇಲ್ನೋಟಕ್ಕೆ ಬಂಪರ್ ಕೊಡುಗೆ ಎಂದು ಅನಿಸಿದರೂ ಒಳಗಿನ ಗುಟ್ಟು ಬೇರೆ ಇದೆ. ದೇಶದಲ್ಲಿರುವ 6.2 ಲಕ್ಷ ಕೋಟಿ ಕಿರುಉದ್ದಿಮೆಗಳಲ್ಲಿ 45 ಲಕ್ಷ ದೊಡ್ಡಗಾತ್ರದ ಕಿರುಉದ್ದಿಮೆಗಳಿಗೆ ಮಾತ್ರ ಈ ನೆರವು ಲಭ್ಯ. ಉಳಿದವರ ಗತಿ ಏನು? ಸಣ್ಣ ಕೈಗಾರಿಕೆಗಳಿಗೆ ಸಾಲ, ಸಾಲಕ್ಕೆ ಖಾತರಿ ನೀಡಿಕೆಯ ಬಗ್ಗೆ ಪ್ಯಾಕೇಜ್ ಹೇಳಿದೆ. ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆಗಳಿಗೆ ಸಾಲ‌ಮಾಡುವ ಶಕ್ತಿ ಎಲ್ಲಿದೆ? ಕಾರ್ಮಿಕರ ಸಂಬಳ ನೀಡಿಕೆಗೆ ನೆರವು, ಹಳೆ ಸಾಲದ ಮೇಲಿನ ಬಡ್ಡಿ ಮನ್ನಾ ಮೊದಲಾದ ನೆರವಿನಿಂದ ಮಾತ್ರ ಸಣ್ಣ ಕೈಗಾರಿಕೆಗಳ ರಕ್ಷಣೆ ಸಾಧ್ಯ ಎಂದು ಸಲಹೆ ನೀಡಿದರು.

ದೇಶದಲ್ಲಿ ಜನ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಹೋಗಲು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಕಾಶದಲ್ಲಿ ವಿಮಾನ ಸಂಚಾರ ವ್ಯವಸ್ಥೆಯನ್ನು ಸುಲಭ ಮಾಡಿ ದುಡ್ಡು ಮಾಡುವ ಯೋಚನೆಯಲ್ಲಿದೆ. ಇದು ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು?
ದೇಶಪ್ರೇಮದ ವಾರಸುದಾರರು ತಾವೆಂದು‌ ಸಾರಿಸಾರಿ ಹೇಳುತ್ತಿರುವ ನರೇಂದ್ರ ಮೋದಿ ಅವರು ಈಗ ರಕ್ಷಣಾ ಇಲಾಖೆಯ FDI ಮಿತಿಯನ್ನು ಶೇ 74ಕ್ಕೆ ಹೆಚ್ಚಿಸುವ ಮೂಲಕ ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದ್ದಾರೆ. ಇದೇನಾ ದೇಶ ಪ್ರೇಮ? ಎಂದು ಮತ್ತೊಮ್ಮೆ ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending