ರಾಜಕೀಯ
ಗುಜರಾತ್ ಗೆ ಒಂದು ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿ ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ, ನಮ್ಮ ಮೇಲೇಕೆ ಮಲತಾಯಿ ಧೋರಣೆ..? : ಸಿದ್ದರಾಮಯ್ಯ ಕಿಡಿ
ಸುದ್ದಿದಿನ, ಬೆಂಗಳೂರು: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ.2009ರಲ್ಲಿಯೂ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನೀಡುತ್ತಿಲ್ಲ ಎಂದು ಆಕ್ರೊಶ ವ್ಯಕ್ತಪಡಿಸಿದರು.
ಕೊರೊನಾ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಸಿಎಂ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ. 3/6
ಇದನ್ನೂ ಓದಿ | ಜೂನ್ 7 ರವರೆಗೆ ಮತ್ತೆ ಲಾಕ್ ಡೌನ್ ; ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ : ಸಿಎಂ ಯಡಿಯೂರಪ್ಪ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯದಿಂದ ಸಾವಿರಾರು ಜನ ಸಾಯುತ್ತಿದ್ದಾರೆ. ಸತ್ಯ ಹೇಳಿದರೆ ಕೇಸು ದಾಖಲಿಸುವ, ಬಂಧಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರಾಗಲೀ, ಸಾಮಾಜಿಕ ಕಳಕಳಿಯಿರುವ ಯಾವ ವ್ಯಕ್ತಿಗಳೇ ಆಗಲಿ ಹೆದರಬಾರದು ಎಂದರು.
ಪ್ರವಾಹ ಪರಿಹಾರದ ವಿಚಾರದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಧೊರಣೆ ಅನುಸರಿಸುತ್ತಿದೆ. ಗುಜರಾತ್ ಗೆ ಒಂದು ಸಾವಿರ ಕೋಟಿ ರೂ.ಗಳ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿಯವರು ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ. ನಮ್ಮ ಮೇಲೇಕೆ ಮಲತಾಯಿ ಧೋರಣೆ?
ಕೋವಿಡ್ ಲಸಿಕೆ ನೀಡುವುದಕ್ಕೆ ನಾವು ವಿರೋಧ ಮಾಡಿರಲಿಲ್ಲ. ಎಲ್ಲರಿಗೂ ಲಸಿಕೆ ಸಿಗಬೇಕು. ಅದಕ್ಕಾಗಿ ಅಭಿಯಾನ ನಡೆಸಬೇಕು ಎಂದು ಈಗಲೂ ಒತ್ತಾಯ ಮಾಡುತ್ತೇನೆ. ಆದರೆ ಲಸಿಕೆಯೇ ಇಲ್ಲದೆ ಆಂದೋಲನಕ್ಕೆ ಚಾಲನೆ ನೀಡಿದವರು ಯಾರು? ಎಂದು ಪ್ರಶ್ನಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243