ದಿನದ ಸುದ್ದಿ
ಆನ್ ಲೈನ್ ತರಗತಿ | ಆಳುವ ನಾಯಕರಿಗೆ ಬೇಸಿಕ್ ನಾಲೆಡ್ಜ್ ಇಲ್ಲ : ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು:ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್‌ಲೈನ್ ತರಗತಿಗಳ ಮೂಲಕ ನೀಡುವ ಪ್ರಧಾನಮಂತ್ರಿ ಅವರ ಪ್ರಸ್ತಾವ, ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ! ಇದರಿಂದ ಸಮಾಜದ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ.
ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್‌ಗಳೆಲ್ಲಿಂದ ಬರಬೇಕು?
ಪೋನ್ ಇದ್ದರೂ ನೆಟ್‌ವರ್ಕ್ ಎಲ್ಲಿದೆ?
ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ? ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ? ಎಂದು ಕಿಡಿಕಾರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243