ದಿನದ ಸುದ್ದಿ

ರೋಷನ್ ಬೇಗ್ ಆಗಾಗ ಬಣ್ಣ ಬದಲಾಸುವ ಗೋಸುಂಬೆ‌ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಭಾನುವಾರ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿ, ಪಕ್ಷದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರಿಗೆ ಮತ ನೀಡುವಂತೆ ಕೋರುತ್ತಾ, ರೋಷನ್ ಬೇಗ್ ಆಗಾಗ ಬಣ್ಣ ಬದಲಾಸುವ ಗೋಸುಂಬೆ‌ ಎಂದು ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಮುಸ್ಲಿಮರಿಗೆ ಚುನಾವಣೆಯಲ್ಲಿ ಟಿಕೆಟ್ ಕೊಡ್ಬೇಕಾದರೆ ಅವರು 10 ವರ್ಷ ಬಿಜೆಪಿ ಕಚೇರಿಯಲ್ಲಿ ಕಸ ಹೊಡೆಯಬೇಕು ಎಂದು ಈಶ್ವರಪ್ಪ ವಿಧಾನ ಪರಿಷತ್ ನಲ್ಲಿ ಹೇಳಿದ್ದರು. ಈ ಕಾರಣಕ್ಕಾಗಿಯೇ ರೋಷನ್ ಬೇಗ್‌ಗೆ ಟಿಕೆಟ್ ಕೊಟ್ಟಿಲ್ಲ. ಅವರು ಕಸಗುಡಿಸಲು ಈಗಷ್ಟೆ ಶುರು ಮಾಡಿದ್ದಾರೆ, 10 ವರ್ಷಗಳ ನಂತರ ಅವರಿಗೆ ಟಿಕೆಟ್ ಕೊಡ್ತಾರೆ ಎಂದು ವ್ಯಂಗ್ಯವಾಡಿದರು.

ಟಿಪ್ಪು ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿದರೂ ಅವರೊಬ್ಬ ದೇಶ ಮೆಚ್ಚುವ ಸ್ವಾತಂತ್ರ್ಯಹೋರಾಟಗಾರ. ಅದೇ ಟಿಪ್ಪುವಿನ ಅಸ್ಥಾನದಲ್ಲಿ ಮೀರ್ ಸಾದಿಕ್ ಎಂಬ ರಾಜದ್ರೋಹಿ, ಮಿತ್ರದ್ರೋಹಿ ಇದ್ದ. ರೋಷನ್ ಬೇಗ್ ಒಬ್ಬ ಈ ಕಾಲದ ಮೀರ್ ಸಾದಿಕ್.

ಇಂತಹ ಮೀರ್ ಸಾದಿಕ್‌ಗಳನ್ನು ರಾಜಕೀಯದಲ್ಲಿ ತಲೆ ಎತ್ತಲು ಬಿಡಬಾರದು. ರೋಷನ್ ಬೇಗ್ ಐಎಂಎ ಹಗರಣದಲ್ಲಿ ಒಬ್ಬ ಆರೋಪಿ. ಸಾವಿರಾರು ಅಮಾಯಕರ ದುಡ್ಡು ಮುಳುಗಿಸಿದ ಆ ಪ್ರಕರಣದಲ್ಲಿ ಜೈಲು ಪಾಲಾಗುತ್ತೇನೆ ಎಂಬ ಭಯದಿಂದ ಅವರು ಬಿಜೆಪಿ ಸೇರಿದ್ದಾರೆ. ‘ಕ್ಷೇತ್ರದ ಜನತೆಗಾಗಿ ಬಿಜೆಪಿ ಜೊತೆ ಹೋದೆ’ ಎನ್ನುವುದು ಅಪ್ಪಟ ಸುಳ್ಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ| ವಾಟ್ಸಾಪ್|9980346243

Trending

Exit mobile version