Connect with us

ದಿನದ ಸುದ್ದಿ

ಸೋನಿಯಾ ಗಾಂಧಿ ವಿರುದ್ಧ ಎಫ್ ಐ ಆರ್ : ಸಾಗರ ಪೊಲೀಸ್ ಅಧಿಕಾರಿಯನ್ನು ಅಮಾನತ್ತಿನಲ್ಲಿಡಿ : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಬೆಂಗಳೂರು : ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರ ವಿರುದ್ಧ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದ ಸಾಗರದ ಪೊಲೀಸ್ ಅಧಿಕಾರಿ ಹದ್ದು ಮೀರಿ ವರ್ತಿಸಿದ್ದಾರೆ. ಮುಖ್ಯಮಂತ್ರಿ ಅವರೇ, ಅನಗತ್ಯ ರಾಜಕೀಯ ಸಂಘರ್ಷಕ್ಕೆ ಅವಕಾಶ ನೀಡದೆ ತಕ್ಷಣ ಈ ಎಫ್ಐಆರ್ ರದ್ದುಪಡಿಸಿ ಮತ್ತು ಅಧಿಕಾರಿಯನ್ನು ಅಮಾನತ್‌ನಲ್ಲಿಡಿ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ದೇಣಿಗೆಯ PMCaresFund ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ.

ಅದನ್ನೇ ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ? ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಲ್ಲಲ್ಲಿ ಪೊಲೀಸರು ಮೊಕದ್ದಮೆ ದಾಖಲಿಸುತ್ತಿರುವುದು ನಡೆದಿದೆ. ಈ ರೀತಿ‌ ನಮ್ಮ ಬಾಯಿ ಮುಚ್ಚಿಸಬಹುದು ಎಂದು ತಿಳಿದುಕೊಂಡಿದ್ದರೆ ಅದು ಮೂರ್ಖತನ. ಮುಂದಿನ ದಿನಗಳಲ್ಲಿ ನಮ್ಮ ಪ್ರಶ್ನೆಗಳು ಇನ್ನಷ್ಟು ಹರಿತವಾಗಲಿದೆ, ಸಂಘರ್ಷ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಸಮಯ ಮತ್ತು ಶ್ರಮವನ್ನು ಕೋವಿಡ್ -19 ಸೋಂಕನ್ನು ಎದುರಿಸಲು ಮತ್ತು ನೊಂದವರಿಗೆ ನೆರವಾಗಲು ವ್ಯಯ ಮಾಡಲಿ. ಈ ಕಷ್ಟದ ದಿನಗಳ ಅವಕಾಶವನ್ನು ವಿರೋಧ ಪಕ್ಷಗಳ ನಾಯಕರನ್ನು, ಕಾರ್ಯಕರ್ತರನ್ನು ಹಣಿಯಲು ದುರುಪಯೋಗ ಮಾಡಿಕೊಳ್ಳಬೇಡಿ.

ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ವಿರೋಧ ಪಕ್ಷದ ನಾಯಕಿಯಾಗಿ ಜನಾಭಿಪ್ರಾಯವನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಇದಕ್ಕೆ ಸ್ಪಂದಿಸುವುದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೋನಿಯಾ ಗಾಂಧಿಯವರ ವಿರುದ್ಧ ದೂರು ನೀಡಿದವನು ಬಿಜೆಪಿ ಕಾರ್ಯಕರ್ತನಾಗಿದ್ದು ರಾಜಕೀಯ ದುರುದ್ದೇಶದಿಂದಲೇ ಇದನ್ನು ಮಾಡಲಾಗಿದೆ ಎಂಬ ಬಗ್ಗೆ ಅನುಮಾನ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸದಿದ್ದಲ್ಲಿ ರಾಜಕೀಯ ಹೋರಾಟ ಅನಿವಾರ್ಯವಾಗಬಹುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending