ದಿನದ ಸುದ್ದಿ
ಸೋನಿಯಾ ಗಾಂಧಿ ವಿರುದ್ಧ ಎಫ್ ಐ ಆರ್ : ಸಾಗರ ಪೊಲೀಸ್ ಅಧಿಕಾರಿಯನ್ನು ಅಮಾನತ್ತಿನಲ್ಲಿಡಿ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ, ಬೆಂಗಳೂರು : ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರ ವಿರುದ್ಧ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದ ಸಾಗರದ ಪೊಲೀಸ್ ಅಧಿಕಾರಿ ಹದ್ದು ಮೀರಿ ವರ್ತಿಸಿದ್ದಾರೆ. ಮುಖ್ಯಮಂತ್ರಿ ಅವರೇ, ಅನಗತ್ಯ ರಾಜಕೀಯ ಸಂಘರ್ಷಕ್ಕೆ ಅವಕಾಶ ನೀಡದೆ ತಕ್ಷಣ ಈ ಎಫ್ಐಆರ್ ರದ್ದುಪಡಿಸಿ ಮತ್ತು ಅಧಿಕಾರಿಯನ್ನು ಅಮಾನತ್‌ನಲ್ಲಿಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ದೇಣಿಗೆಯ PMCaresFund ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ.
ಅದನ್ನೇ ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ? ಇತ್ತೀಚೆಗೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಲ್ಲಲ್ಲಿ ಪೊಲೀಸರು ಮೊಕದ್ದಮೆ ದಾಖಲಿಸುತ್ತಿರುವುದು ನಡೆದಿದೆ. ಈ ರೀತಿ ನಮ್ಮ ಬಾಯಿ ಮುಚ್ಚಿಸಬಹುದು ಎಂದು ತಿಳಿದುಕೊಂಡಿದ್ದರೆ ಅದು ಮೂರ್ಖತನ. ಮುಂದಿನ ದಿನಗಳಲ್ಲಿ ನಮ್ಮ ಪ್ರಶ್ನೆಗಳು ಇನ್ನಷ್ಟು ಹರಿತವಾಗಲಿದೆ, ಸಂಘರ್ಷ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಸಮಯ ಮತ್ತು ಶ್ರಮವನ್ನು ಕೋವಿಡ್ -19 ಸೋಂಕನ್ನು ಎದುರಿಸಲು ಮತ್ತು ನೊಂದವರಿಗೆ ನೆರವಾಗಲು ವ್ಯಯ ಮಾಡಲಿ. ಈ ಕಷ್ಟದ ದಿನಗಳ ಅವಕಾಶವನ್ನು ವಿರೋಧ ಪಕ್ಷಗಳ ನಾಯಕರನ್ನು, ಕಾರ್ಯಕರ್ತರನ್ನು ಹಣಿಯಲು ದುರುಪಯೋಗ ಮಾಡಿಕೊಳ್ಳಬೇಡಿ.
ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ವಿರೋಧ ಪಕ್ಷದ ನಾಯಕಿಯಾಗಿ ಜನಾಭಿಪ್ರಾಯವನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಇದಕ್ಕೆ ಸ್ಪಂದಿಸುವುದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೋನಿಯಾ ಗಾಂಧಿಯವರ ವಿರುದ್ಧ ದೂರು ನೀಡಿದವನು ಬಿಜೆಪಿ ಕಾರ್ಯಕರ್ತನಾಗಿದ್ದು ರಾಜಕೀಯ ದುರುದ್ದೇಶದಿಂದಲೇ ಇದನ್ನು ಮಾಡಲಾಗಿದೆ ಎಂಬ ಬಗ್ಗೆ ಅನುಮಾನ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸದಿದ್ದಲ್ಲಿ ರಾಜಕೀಯ ಹೋರಾಟ ಅನಿವಾರ್ಯವಾಗಬಹುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಸತಿ ಯೋಜನೆ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಬ್ಯವಿದ್ದು ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು ರೂ.3.50 ಲಕ್ಷ ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ6 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ6 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ5 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ6 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ