ದಿನದ ಸುದ್ದಿ

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಸಿದ್ದರಾಮಯ್ಯ ಬೆಂಬಲ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಮೈಸೂರು : ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮರು ನಡೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಶನಿವಾರ ಮಾತನಾಡಿದ ಅವರು, ಪಿ.ಎಸ್.ಐ. ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಈಗಾಗಲೇ 20 ಮಂದಿಯ ಬಂಧನವಾಗಿದೆ. ಈಗಿರುವಾಗ ಮರು ಪರೀಕ್ಷೆ ಮಾಡುವುದು ಸರಿ ಇದೆ. ಆದರೆ, ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version