ರಾಜಕೀಯ
ವಿಶ್ವಾಸ ಮತ ಸಾಬೀತು ಪಡಿಸ್ತೇವೆ, ಹೇಗೆ ಅಂತ ಕಾದು ನೋಡಿ : ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್
ಸುದ್ದಿದಿನ, ಬೆಂಗಳೂರು : ಶಾಸಕರ ಅನರ್ಹತೆಯ ಬಗ್ಗೆ ಸಭಾಧ್ಯಕ್ಷರು ನಿರ್ಣಯ ಕೈಗೊಳ್ಳುತ್ತಾರೆ. ಎರಡು ಪಕ್ಷಗಳ ನಾಯಕರು ಚರ್ಚಿಸಿ ವಿಶ್ವಾಸ ಮತ ಯಾಚನೆಯ ನಿರ್ಧಾರಕ್ಕೆ ಬಂದಿದ್ದೇವೆ, ಅದರಲ್ಲಿ ಯಶಸ್ವಿ ಕೂಡ ಆಗುತ್ತೇವೆ. ನಾವೇನು ಬಿಜೆಪಿಯವರಂತೆ ಅಪರೇಷನ್, ಸರ್ಜರಿ ಇಂತಹ ಹೀನ ರಾಜಕಾರಣ ಮಾಡುವವರಲ್ಲ. ವಿಶ್ವಾಸ ಮತ ಸಾಬೀತು ಹೇಗೆ ಮಾಡುತ್ತೇವೆ ಎಂದು ಕಾದು ನೋಡಿ ಅಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಕಾಣ್ತಾರೆ ಅಂತ ಎಂಟಿಬಿ ನಾಗರಾಜ್ ಹೇಳ್ತಿದ್ರು. ಅವ್ರೇ ರಾಜೀನಾಮೆ ಕೊಟ್ಟಿದ್ದಾರೆ, ಈಗ ನಾನು ಅವರ ಎದೆ ಬಗೆದು ನೋಡೋಕೆ ಆಗುತ್ತದೆಯೇ?
ರಾಜಕಾರಣ ಇರೋದು ಜನ ಸೇವೆ ಮಾಡಲು ಎಂಬುದನ್ನೇ ಕೆಲವರು ಮರೆತಿದ್ದಾರೆ. ಅಂಥವರಿಗೆ ಕಾಲವೇ ತಕ್ಕ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.
ರೋಷನ್ ಬೇಗ್ ಅವರನ್ನು ಅಮಾನತ್ತು ಮಾಡಲಾಗಿದೆ. ರಾಮಲಿಂಗಾರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಅತೃಪ್ತ ಶಾಸಕರನ್ನ ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಸಹ ಮಾಡಿದ್ದೇವೆ. ಸಿದ್ದಾಂತವಿಲ್ಲದ ಜೊಳ್ಳುಗಳೆಲ್ಲ ಹಾರಿ ಹೋಗಿದ್ದು, ನಮ್ಮ ಪಕ್ಷ ಹಿಂದಿಗಿಂತ ಈಗ ಮತ್ತಷ್ಟು ಸದೃಢವಾಗಿದೆ ಎಂಬ ಖುಷಿಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243