ರಾಜಕೀಯ

ರಾಜಕೀಯದ ಅಖಾಡದಲ್ಲಿ‌ ನಾವೂ ಕುಸ್ತಿ ಆಡಿದವರು : ಸಿದ್ದರಾಮಯ್ಯ ಟ್ವೀಟ್

Published

on

ಸುದ್ದಿದಿನ ಡೆಸ್ಕ್ : ರಾಜ್ಯದ ಕೆಲವು ಬಿಜೆಪಿ‌ ಶಾಸಕರು ಕೂಡಾ ನಮ್ಮ ಸಂಪರ್ಕದಲ್ಲಿದ್ದಾರೆ. ನಾವೇನು ಕೈಕಟ್ಟಿ ಕೂತಿಲ್ಲ.‌ ರಾಜಕೀಯದ ಅಖಾಡದಲ್ಲಿ‌ ನಾವೂ ಕುಸ್ತಿ ಆಡಿದವರು, ಪಟ್ಟುಗಳು ನಮಗೂ ಗೊತ್ತು‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಚೌಕಿದಾರ್’ ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ದೇಶದ ಚೌಕಿದಾರ್ ಎಂದು ಹೇಳಿಕೊಳ್ತೀರಿ. ಈಗ ನಮ್ಮ ರಾಜ್ಯದ ಶಾಸಕರನ್ನು ಹೊಟೇಲ್ ಕೋಣೆಗಳಲ್ಲಿ ಕೂಡಿ ಹಾಕಿ ಕಾಯುತ್ತಿರುವ ಚೌಕಿದಾರ್ ಆಗಿಬಿಟ್ಟಿರಲ್ಲಾ…
ಛೆ…‌ ಎಂದು ವ್ಯಂಗವಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version