ರಾಜಕೀಯ
ನಾಡಿನ ಹೆಮ್ಮೆಯ ಪುತ್ರ ಯೋಧ ಗುರು ಕುಟುಂಬದ ಶೋಕದಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ : ಸಿದ್ದರಾಮಯ್ಯ ನಮನ

ಸುದ್ದಿದಿನ ಬೆಂಗಳೂರು : ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೀಡಾಗಿ ವೀರಮರಣವನ್ನಪ್ಪಿದ ನಮ್ಮ ನಾಡಿನ ಹೆಮ್ಮೆಯ ಪುತ್ರ ಎಚ್.ಗುರು ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ಮಂಡ್ಯದ ಗುಡಿಗೆರೆ ನಿವಾಸಿಯಾದ ವೀರಯೋಧನ ಕುಟುಂಬದ ಶೋಕದಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮನ ಸಲ್ಲಿಸಿದ್ದಾರೆ.
ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೀಡಾಗಿ ವೀರಮರಣವನ್ನಪ್ಪಿದ ನಮ್ಮ ನಾಡಿನ ಹೆಮ್ಮೆಯ ಪುತ್ರ ಎಚ್.ಗುರು ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ಮಂಡ್ಯದ ಗುಡಿಗೆರೆ ನಿವಾಸಿಯಾದ ವೀರಯೋಧನ ಕುಟುಂಬದ ಶೋಕದಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ.#Pulwama @INCKarnataka
— Siddaramaiah (@siddaramaiah) February 15, 2019
May the soul of our proud son of our soil, H Guru who sacrificed his life in the unfortunate terror attack in Pulwama, rest in peace. My deepest condolences to his family members & well-wishers.#Pulwama#RIPBraveHearts pic.twitter.com/6wtj1Cd5Ed
— Siddaramaiah (@siddaramaiah) February 15, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್ಟಿ ಮೊತ್ತ ಎಷ್ಟು ಗೊತ್ತಾ?!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್ಟಿ ಆದಾಯ ಸಂಗ್ರಹವಾಗಿದೆ.
35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
