ರಾಜಕೀಯ

ರೋಷನ್ ಬೇಗ್ ಮೇಲೆ ಕಾಂಗ್ರೆಸ್ ಕಟ್ಟು ನಿಟ್ಟಿನ ಕ್ರಮ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ನನ್ನದು ಹಳ್ಳಿ ಭಾಷೆ ಮತ್ತು ನೇರ ನುಡಿ. ಸ್ವಾಭಿಮಾನಿಯಾದವರು ಮತ್ತು ಪ್ರಾಮಾಣಿಕರು ಮಾತ್ರ ನೇರ ನಿಷ್ಠುರ ವ್ಯಕ್ತಿತ್ವ ಹೊಂದಿರುತ್ತಾರೆ, ಆದರೆ ಇದು ಕೆಲವು ಸೋಗಲಾಡಿ ವ್ಯಕ್ತಿತ್ವದವರಿಗೆ ಅಹಂಕಾರದಂತೆ ಕಾಣುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮೊದಲು ನಾವು ಜನಪರ ಮತ್ತು ಬಡವರ ಪರವಾಗಿದ್ದೇವಾ ಎಂಬುದು ಮುಖ್ಯವಾಗುತ್ತದೆ. ನಾವು ಜನಪರವಾಗಿದ್ದಾಗ ಅಂಥವರ ಮಾತಿಗೆ ಮಹತ್ವ ನೀಡುವ ಅಗತ್ಯವಿರುವುದಿಲ್ಲ. ಇದೇ ಕಾರಣಕ್ಕಾಗಿ ನಾನು ಅಂತಹ ಹೇಳಿಕೆಗಳಿಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

ರೋಷನ್ ಬೇಗ್ ಅವರು ಮಂತ್ರಿಯಾಗುವ ಬಯಕೆ ಹೊಂದಿದ್ದರು ಜೊತೆಗೆ ಲೋಕಸಭಾ ಟಿಕೆಟ್‌ನ ಆಕಾಂಕ್ಷಿ ಕೂಡ ಆಗಿದ್ದರು. ಇವೆರಡು ಕೈತಪ್ಪಿರುವುದರಿಂದ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅವರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಿದೆ. ಇನ್ನು ಹೆಚ್.ವಿಶ್ವನಾಥ್ ಅವರು ನಮ್ಮ ಪಕ್ಷದವರಲ್ಲ, ಜೆಡಿಎಸ್ ಪಕ್ಷದವರು. ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version