ದಿನದ ಸುದ್ದಿ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ‌ ಎಂದಿದ್ದಾರೆ.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ‌ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version