ದಿನದ ಸುದ್ದಿ
ನರೇಂದ್ರ ಮೋದಿಗೆ ಶುಭಕೋರಿದ ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು : ಸೋಲು-ಗೆಲುವುಗಳು ರಾಜಕೀಯ ಜೀವನದ ಅವಿಭಾಜ್ಯ ಅಂಗ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ನಮ್ಮ ಪಕ್ಷದ ಸೋಲು ಅನಿರೀಕ್ಷಿತವಾಗಿದ್ದರೂ ಜನಾಭಿಪ್ರಾಯಕ್ಕೆ ತಲೆ ಬಾಗಿ ವಿನಯಪೂರ್ವಕವಾಗಿ ಸ್ವೀಕರಿಸಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಮತದಾರ ಬಂಧುಗಳಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ
ರಾಜ್ಯದಿಂದ ಆಯ್ಕೆಯಾದ ಎಲ್ಲ ಸಂಸದರೂ ಚುನಾವಣೆ ಮುಗಿದ ಮೇಲೆ ಪಕ್ಷಾತೀತವಾಗಿ ನಮ್ಮ ರಾಜ್ಯದ ಪ್ರತಿನಿಧಿಗಳಾಗಿರುತ್ತಾರೆ, ಅವರೆಲ್ಲರಿಗೂ ಅಭಿನಂದನೆಗಳು. ಲೋಕಸಭೆಯಲ್ಲಿ ರಾಜ್ಯದ ದನಿ ಕೇಳಿಸುವಂತೆ ಮತ್ತು ಹಿತರಕ್ಷಿಸುವಂತೆ ಅವರೆಲ್ಲರೂ ಕೆಲಸ ಮಾಡಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಈ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಮತ್ತು ಮುಖ್ಯಪಾತ್ರ ವಹಿಸಿದ್ದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮುಂದಿನ ಐದು ವರ್ಷ ಜನ ಮೆಚ್ಚುವಂತಹ, ಇಡೀ ದೇಶವನ್ನು ಕುವೆಂಪು ಅವರು ಹೇಳಿರುವಂತೆ ‘’ಸರ್ವಜನಾಂಗದ ಶಾಂತಿಯ ತೋಟ’’ವನ್ನಾಗಿ ಮಾಡುವ ರೀತಿಯಲ್ಲಿ ಆಡಳಿತ ನೀಡಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243