ದಿನದ ಸುದ್ದಿ

ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಜೂನ್ 5 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜೂನ್ 5 ರಂದು ಮಧ್ಯಾಹ್ನ 12.15 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್‍ಗೆ ಆಗಮಿಸಿ ಮ.12.30 ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಶಿರಮಗೊಂಡನಹಳ್ಳಿಯ ಸುಧಾ ವಿರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 3 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತರಳುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version