ದಿನದ ಸುದ್ದಿ
‘ಸೂಟು-ಬೂಟಿನ ಸರದಾರ’ನಂತೆ ಯೂರೋಪ್ ಪ್ರವಾಸಕ್ಕೆ ತೆರಳಿದ ಸಿದ್ದು..!
ಸುದ್ದಿದಿನ, ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಯೂರೋಪ್ ಪ್ರವಾಸಕ್ಕೆ ಹೊರಟರು. ಈ ಸಂದರ್ಭದಲ್ಲಿ ಸಿದ್ದು ಆತ್ಮೀಯರು ಹಾಗೂ ಕಾಂಗ್ರಸ್ ಮುಖಂಡರು ಅವರನ್ನು ಸಂತೋಷದಿಂದ ಬೀಳ್ಕೊಟ್ಟರು.
ಸೂಟು,ಬೂಟು ಧರಿಸಿದ್ದ ಸಿದ್ದರಾಮಯ್ಯರವರನ್ನು ಅಭಿಮಾನಿಗಳು ಕಣ್ತುಂಬಿಕೊಂಡರು. ಸಿದ್ದು ಅದರ ಮದ್ಯವೇ ನಗೆ ಚಟಾಕಿ ಹಾರಿಸುತ್ತಿದ್ದರು. ಪ್ರವಾಸದಲ್ಲಿ ಸಿದ್ದು ಪುತ್ರ ಯತೀಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಕೂಡ ಅವರ ಜೊತೆಗೂಡಿದರು.
ಕೆಂಪೇಗೌಡ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ಎಂಬ್ರೇಷ್ ಫ್ಲೈಟ್ ನಲ್ಲಿ ದುಬೈಮಾರ್ಗವಾಗಿ ರಷ್ಯಾಗೆ ಹೋಗಲಿರುವ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಆಂಜನೇಯ,ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಹಾಗೂ ಶಾಸಕ ಬಿ.ಸಿ.ಪಾಟೀಲ್ ಸೇರಿದಂತೆ ಹಲವರು ಶುಭಹಾರೈಸಿ ಬೀಳ್ಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


