ದಿನದ ಸುದ್ದಿ

ಇನ್ನೂ 19 ಸಿಡಿ ಇದೆಯಂತೆ, ಮಾತನಾಡುವಾಗ ನಾಲಗೆ ಹಿಡಿತದಲ್ಲಿರಲಿ : ನಳಿನ್ ಕುಮಾರ್ ಕಟೀಲ್ ಗೆ ಸಿದ್ದರಾಮಯ್ಯ ಎಚ್ಚರಿಕೆ..!

Published

on

ಸುದ್ದಿದಿನ ಡೆಸ್ಕ್ : ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ನಾಯಕರಿಗೆ ದಾನ ಮಾಡೋಣ ಎಂದು90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ.ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿ ಟ್ವೀಟ್ ಮಾಡಿದ್ದಾರೆ.

ಮಸ್ಕಿ ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ, ʻವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ ಪಕ್ಷದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ಅವರೊಳಗಿನ ಆಂತರಿಕ ತಿಕ್ಕಾಟದಿಂದ ಶೀಘ್ರವೇ ಕಾಂಗ್ರೆಸ್ ತೊರೆಯಲಿದ್ದಾರೆʼ ಎಂದು ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಅವರಿಗೆ ವ್ಯಂಗ್ಯವಾಡಿದ್ದರು.

ಇದನ್ನೂ ಓದಿ | ಕುಸಿಯುತ್ತಿರುವ ನೈತಿಕ ಮೌಲ್ಯಗಳು – ಸರಿಪಡಿಸುವ ಜವಾಬ್ದಾರಿ ಯಾರದ್ದು..?

ಹಾಗೂ ಕಾಂಗ್ರೆಸ್ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಿಂಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಜೆಡಿಎಸ್‌ ತೊರೆದು ಬಂದಿದ್ದ ಸಿದ್ದರಾಮಯ್ಯ ಅವರು ಇದೀಗ ಕಾಂಗ್ರೆಸ್‌ ಪಕ್ಷದಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆ ಖರೀದಿಸಿದ್ದರಾ ತಿಳಿಸಿ ಎಂದು ನಳಿನ್ ಕಟೀಲ್ ಲೇವಡಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಗೆ ಸಿದ್ದರಾಮಯ್ಯ ಮಾತನಾಡುವಾಗ ನಾಲಗೆ ಮೇಲೆ ಹಿಡಿತವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version