ದಿನದ ಸುದ್ದಿ
ಫ್ರಾಯ್ಡ್ ಮತ್ತು ಬೌದ್ಧಧರ್ಮ
- ರಾಣಪ್ಪ ಡಿ ಪಾಳಾ
ಎರಡು ಸಾವಿರದ ಆರು ನೂರು ವರ್ಷಗಳ ಹಿಂದೆ ಭಾರತೀಯ ನೆಲದಲ್ಲಿ ಬೌದ್ಧಧರ್ಮವು ಮಾನವನ ಮನಸ್ಸಿನ ಮೇಲೆ ಸಂಶೋಧನೆ ನಡೆಸಿತು. ಮನಸ್ಸು ದುಃಖದ ಕೇಂದ್ರಬಿಂದು ಬೌದ್ಧಧರ್ಮ ಸಾಬೀತಾಯಿತು. ಬುದ್ಧನು ತನ್ನ ಸ್ವ-ಪರಿಶೋಧನೆಯ ಮೂಲಕ, ಉಪಪ್ರಜ್ಞೆ ಜಾಗೃತಿಯು ದುಃಖವನ್ನು ಉಂಟುಮಾಡಬಹುದು ಮತ್ತು ಪರಿಹರಿಸಬಹುದು ಎಂದು ಕಂಡುಹಿಡಿದನು.
ಸಿಗ್ಮಂಡ್ ಫ್ರಾಯ್ಡ್ 1856 ರಲ್ಲಿ ಆಸ್ಟ್ರಿಯಾದಲ್ಲಿ ಜನಿಸಿದರು. ಮನೋವಿಜ್ಞಾನಿ ಫ್ರಾಯ್ಡ್ ಮನೋವಿಶ್ಲೇಷಣಾ ವಿಧಾನವನ್ನು ಆಧುನಿಕ ವಿಜ್ಞಾನಕ್ಕೆ ಪರಿಚಯಿಸಿದರು. (ಬುದ್ಧ ಮತ್ತು ಬೌದ್ಧರು ಎರಡು ಸಾವಿರ ವರ್ಷಗಳ ಹಿಂದೆ ಈ ಮನೋರೋಗವನ್ನು ರಚಿಸಿದ್ದಾರೆ.)
ತನ್ನ ತಂದೆಯ ಮರಣದಿಂದ ಫ್ರಾಯ್ಡ್ ತುಂಬಾ ಖಿನ್ನತೆಗೆ ಒಳಗಾದ. ಆಗ ಮಾತ್ರ ಅವನು ಮನಸ್ಸು ಮಾಡಿದ. ಅವನು ಇನ್ನೂ ಕಾಣದ ತನ್ನ ಉಪಪ್ರಜ್ಞೆ ಜಗತ್ತಿನಲ್ಲಿ ಪ್ರವೇಶಿಸಿದನು. ಆತ್ಮವನ್ನು ವಿಶ್ಲೇಷಿಸುವ ಮೂಲಕ ಅವನು ತನ್ನ ದುಃಖದಿಂದ ಮುಕ್ತನಾದನು. ತನ್ನದೇ ಆದ ಸ್ವಯಂ ಪರೀಕ್ಷೆಯ ಮೂಲಕ, “ತೊಂದರೆಯಿಂದ ಹೊರಬರಲು ಏಕೈಕ ಮಾರ್ಗವೆಂದರೆ ಅದನ್ನು ನೋಡುವುದು” ಎಂದು ಅವರು ಕಂಡುಕೊಂಡರು. ಬೌದ್ಧಧರ್ಮ ಬಹಳ ಹಿಂದೆಯೇ ಈ ‘ಮನಸ್ಸನ್ನು’ ಕಲಿಸಿತು.
ಬೌದ್ಧಧರ್ಮವು ಜನನದ ಅರ್ಹತೆಗಳನ್ನು ವ್ಯಾಖ್ಯಾನಿಸಿದಾಗ ಅದರ ತತ್ತ್ವಶಾಸ್ತ್ರದಿಂದ ಜನ್ಮ ತತ್ವಶಾಸ್ತ್ರವನ್ನು ಮುರಿಯಿತು. ಬೌದ್ಧಧರ್ಮವೆಂದರೆ “ವೀಕ್ಷಕ ಅಥವಾ ಪಕ್ಷಿ, ಅವರ ಮನಸ್ಸು ಅವರ ಜ್ಞಾನವನ್ನು ನಿರ್ಧರಿಸುತ್ತದೆ. ಜ್ಞಾನವು ಒಬ್ಬರ ಗುಣಗಳನ್ನು ಮತ್ತು ಅಸ್ತಿತ್ವವನ್ನು ನಿರ್ಧರಿಸುತ್ತದೆ.”
ಮನಸ್ಸು, ಬಾಹ್ಯ ಪ್ರಪಂಚದ ಬೋಧನೆಯಲ್ಲಿ, ಬಾಹ್ಯ ಪ್ರಪಂಚದ ಸಾಕ್ಷಾತ್ಕಾರದಲ್ಲಿ ಬೆಳೆಯುತ್ತದೆ. ಬೋಧನೆ ಅಥವಾ ಅರಿವಿಲ್ಲದೆ ಮನಸ್ಸು ಇಲ್ಲ. ಆಧುನಿಕ ಮನೋವಿಶ್ಲೇಷಣೆಯಲ್ಲಿ ಬೌದ್ಧಧರ್ಮವು ಹೀಗೆ ಹೇಳುತ್ತದೆ: “ಜನರು ಜನಿಸಿದಾಗ ಅವರು ಖಾಲಿ ಹಾಳೆಗಳಾಗಿ ಜನಿಸುತ್ತಾರೆ. ಈ ಜಗತ್ತಿನಲ್ಲಿ, ಅವರು ನೋಡುವ, ಕೇಳುವ ಮತ್ತು ಕಲಿಯುವದರಿಂದ ಒಳ್ಳೆಯದು ಮತ್ತು ಕೆಟ್ಟದ್ದನ್ನು ಗ್ರಹಿಸಲು ಸಾಧ್ಯವಾಗುತ್ತದೆ.”
(ರಾಣಪ್ಪ ಡಿ ಪಾಳಾ
ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ
ಮನೋವಿಜ್ಞಾನ ವಿಭಾಗ
ಮೊ : 9663727268)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್ ಇಂಡಿಯಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಪೇದೆ ಕೆ.ಆರ್ ಹುಲಿರಾಜ ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಗಟ್ಟ ಗ್ರಾಮದ ತಂದೆ ಕೆ.ರಮೇಶ್, ತಾಯಿ ಲಕ್ಷ್ಮೀ ಅವರ ಮೊದಲನೇ ಮಗ ಕೆ.ಆರ್ ಹುಲಿರಾಜ, ವೃತ್ತಿಯಲ್ಲಿ ಕೆ.ಎಸ್.ಆರ್.ಟಿ.ಸಿ ಪೇದೆ, ಪತ್ನಿ ಸವಿತಾ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗಿ, ಇಬ್ಬರು ಮಕ್ಕಳು ಇದ್ದಾರೆ.
ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಖೋ-ಖೋ, ಓಟ, ವಾಲಿಬಾಲ್, ಕ್ರಿಕೆಟ್ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಜೊತೆಗೆ ಬಳ್ಳಾರಿ ಡಯಟ್ ನಲ್ಲಿ ಡಿ.ಎಡ್. ಪದವಿ ಪಡೆದು ನಂತರ ಬಿ.ಎ. ಪದವಿಯನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದಾರೆ.
ಪೇದೆಯಾಗಿ ಆಯ್ಕೆ
2014ನೇ ಮಾರ್ಚ್ 3ನೇ ತಾರೀಖು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಪೇದೆಯಾಗಿ ಆಯ್ಕೆಯಾಗಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಎರಡು ವರ್ಷಗಳ ಕಾಲ ತರಬೇತಿ ಪೂರ್ಣಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ 6 ವರ್ಷಗಳ ಕಾಲ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಚಳ್ಳಕೇರೆ ತಾಲೂಕಿನ ಡಿಪೋದಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
800,1500 ಮೀಟರ್ ಓಟದ ಸ್ಪರ್ಧೆ ಆಯ್ಕೆ
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿ, ನಂತರ ರಾಜ್ಯ ಮಟ್ಟದಲ್ಲಿ 800 ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು, 2024ನೇ ಸಾಲಿನ ಡಿಸೆಂಬರ್ 6, 7 ಹಾಗೂ 8 ರಂದು ನಡೆಯುವ ಆಲ್ ಇಂಡಿಯಾ ರೋಡ್ ಟ್ರಾನ್ಸ್‌ಪೋರ್ಟ್ ಕಾರ್ಪೋರೇಷನ್ ಲಿಮಿಟೆಡ್ ಅಥ್ಲೆಟಿಕ್ ಮೀಟ್, ಪಾರ್ಟ್ ಸೇಡಿಯಂ, ವಿಶಾಖಪಟ್ಟಣಂನಲ್ಲಿ ನಡೆಯುವ ಅಥ್ಲೆಟಿಕ್ಸ್ ಗೆ ಆಯ್ಕೆಯಾಗಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.
ಇಲಾಖೆ ಪ್ರೋತ್ಸಾಹ
ASRTU ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವ ನಿಗಮದ ಆಟಗಾರರಿಗೆ ಅಭ್ಯಾಸ ಮಾಡಲು ವೇತನ ಸಹಿತ ರಜೆ ಹಾಗೂ ಕ್ರೀಡಾ ಸಾಮಗ್ರಿ ಕೊಟ್ಟಿದ್ದಾರೆ .ASRTU ವತಿಯಿಂದ ದೇಶದ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗಿದೆ. ರಾಜ್ಯದ ಹಾಗೂ ಜಿಲ್ಲೆಯ ಇಲಾಖೆಯ ಅಧಿಕಾರಿಗಳಿಗೆ ಪೇದೆ ಕೆ.ಆರ್. ಹುಲಿರಾಜ್ ರಿಗೆ ಧನ್ಯವಾದಗಳನ್ನು ತಿಳಿಸಿದರು.
ಒಟ್ಟಾರೆಯಾಗಿ ASRTU Athletics ಡಿಸೆಂಬರ್-2024 ಕ್ರೀಡಾಕೂಟವನ್ನು ಡಿಸೆಂಬರ್ 06 ರಿಂದ 8 ವರೆಗೆ ವಿಶಾಖಪಟ್ಟಣಂನಲ್ಲಿ ಆಯೋಜಿಸಿದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯ ನಿವಾಸಿ ಪೇದೆ ಕೆ.ಆರ್ ಹುಲಿರಾಜ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಈ ಸಮಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಂದೆ ತಾಯಿ, ಪೋಷಕರು ಹಾಗೂ ಸ್ನೇಹಿತರು ಶುಭಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು.
ಮುಖ್ಯ ಅತಿಥಿಗಳಾಗಿ ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐಪಿಸ್ ಹಾಗೂ ಕಿರುತೆರೆಯ ರಿಯಾಲಿಟಿ ಶೋ ಮಹಾನಟಿ ಖ್ಯಾತಿಯ ಬಿಂದು ಹೊನ್ನಾಳಿ ಭಾಗವಹಿಸಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಮೃತೇಶ್ವರ ಬಿ.ಜಿ ವಹಿಸಿದ್ದರು. ಐ ಕ್ಯು ಎಸ್ ಸಿ ಸಂಚಾಲಕರಾದ ವಿಜಯ್ ಕುಮಾರ್ ಎನ್.ಸಿ ಅವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ಷಣ್ಮುಖಪ್ಪ ಕೆ.ಹೆಚ್ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಡಿವೈಎಸ್ ಪಿ ಸ್ಯಾಮ್ ವರ್ಗೀಸ್ ಐ ಪಿ ಎಸ್ ಅವರ ವ್ಯಕ್ತಿಪರಿಚಯವನ್ನು ಪ್ರಾಧ್ಯಾಪಕಿ ಡಾ.ದಾಕ್ಷಾಯಿಣಿ ಡೋಂಗ್ರೆ ಅವರು ಹಾಗೂ ಕಿರುತೆರೆ ನಟಿ ಬಿಂದು ಹೊನ್ನಾಳಿಯವರ ವ್ಯಕ್ತಿಪರಿಚಯವನ್ನು ಡಾ.ಶಕೀಲ್ ಅಹಮ್ಮದ್ ಅವರು ಮಾಡಿಕೊಟ್ಟರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಸಂಯೋಜಕರಾದ ಡಾ.ರಮೇಶ್ ಅಯ್ಯನಹಳ್ಳಿ ಹಾಗೂ ಪ್ರಸನ್ನ ಷ, ರೆಡ್ ಕ್ರಾಸ್ ನ ಸಂಯೋಜಕರಾದ ಡಾ.ಪ್ರದೀಪ್ ಕುಮಾರ್ ಜಿಎಂ, ರೋವರ್ಸ್ ನ ಸುರೇಶ್ ಜಿ.ಎಸ್, ರೇಂಜರ್ಸ್ ನ ಡಾ.ಶಕುಂತಲಾ ಹಾಗೂ ಸುಪ್ರಿಯಾ ಬುಟ್ಟಿ, ಉದ್ಯೋಗ ಕೋಶದ ಸಂಚಾಲಕರಾದ ಡಾ.ಮಂಜುಳ ಟಿ, ಕಾಲೇಜು ಸಮಿತಿಯ ಸದಸ್ಯರು, ಬೋಧಕವರ್ಗ ಹಾಗೂ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಾದ ತೇಜು, ಭಾಗ್ಯ ಜಿ.ಜಿ ಆಶಯಗೀತೆ ಹಾಡಿದರು. ಮಂಜುನಾಥ ಮತ್ತು ಲೋಹಿತ್ ನಿರೂಪಿಸಿದರು. ಸಿದ್ದೇಶ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
-
ದಿನದ ಸುದ್ದಿ6 days ago
ಇಂದು ವಿಶ್ವ ಏಡ್ಸ್ ದಿನ; ಎಚ್ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ
-
ಕ್ರೀಡೆ4 days ago
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
-
ದಿನದ ಸುದ್ದಿ2 days ago
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
-
ಕ್ರೀಡೆ4 days ago
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ
-
ದಿನದ ಸುದ್ದಿ5 days ago
ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ
-
ಕ್ರೀಡೆ5 days ago
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ