Connect with us

ದಿನದ ಸುದ್ದಿ

ದೇಗುಲ ವಿಷ ಪ್ರಸಾದ : ಮಹತ್ವದ ಸುಳಿವು ಲಭ್ಯ, ಸಾವಿನ ಸಂಖ್ಯೆ 14 ಕ್ಕೆ ಏರಿಕೆ ; ಪತಿ,ಪತ್ನಿ ಇಬ್ಬರೂ ಸಾವು

Published

on

ಸುದ್ದಿದಿನ ಡೆಸ್ಕ್ : ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇಗುಲ ವಿಷ ಪ್ರಸಾದ ವಿಚಾರ ಮಹತ್ವದ ಸುಳಿವು ಲಭ್ಯವಾಗಿದ್ದು ಕಿಂಗ್ ಪಿನ್ ಗಾಗಿ ಶೋದಕಾರ್ಯನಡೆದಿದೆ. ಈ ಘಟನೆಯಲ್ಲಿ ಪ್ರಭಾವಿ ವ್ಯಕ್ತಿ ಕೈವಾಡ ಶಂಕೆ ವ್ಯಕ್ತವಾಗಿದ್ದು, ತಮಿಳುನಾಡು ಮೂಲದ ವ್ಯಕ್ತಿಗಾಗಿ ಶೋದ ಕಾರ್ಯವನ್ನು ಗಡಿಯಂಚಿನ ಗ್ರಾಮಗಳಲ್ಲಿ ರಾಜ್ಯ ಪೊಲೀಸರು ನಡೆಸಿದ್ದಾರೆ.

ಈ ಸಂಜೆವರೆಗೆ ಮತ್ತಷ್ಟು ಜನರ ಬಂಧನ ಸಾಧ್ಯತೆಯಿದ್ದು, ಬಂಧಿತರನ್ನ ನಿರಂತರ ವಿಚಾರಣೆಗೆ ಒಳಪಡಿಸಿರುವ ತನಿಖಾಧಿಕಾರಿಗಳು
ತಡ ರಾತ್ರಿ ತಮಿಳುನಾಡಿನ ಧರ್ಮಪುರಿಗೆ ತೆರಳಿರುವ ರಾಜ್ಯ ಪೊಲೀಸರ ಏಳು ತಂಡಗಳಾಗಿ ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆಗಿಳಿದಿವೆ.

ವಕಾಲತ್ತು ವಹಿಸದಂತೆ ವಕೀಲರ ಸಭೆ

ಅರೋಪಿಗಳ ಪರ ವಕಾಲತ್ತು ವಹಿಸದಿರುವ ಬಗ್ಗೆ ವಕೀಲರ ಸಭೆ ಇಂದು ಮದ್ಯಾಹ್ನ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದ್ದು,ಸಂತಾಪ ಸೂಚಕ ಸಭೆಯಲ್ಲಿ ನಿರ್ಣಯ ಸಾಧ್ಯತೆ ಇದೆ‌ ಎಂದುಚಾಮರಾಜನಗರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಇಂದೂಶೇಖರ್ ಮಾಹಿತಿ ನೀಡಿದ್ದಾರೆ.

ಸುಳ್ವಡಿ ಗ್ರಾಮದಲ್ಲಿ ವಿಷ ಪ್ರಸಾದ ಸೇವನೆ‌ ಪ್ರಕರಣ | ಮೂವರ ಸ್ಥಿತಿ ಗಂಭಿರ

ಕೆ.ಆರ್. ಆಸ್ಪತ್ರೆಯಲ್ಲಿರುವ ಮೂವರ ಸ್ಥಿತಿ ಇನ್ನೂ ಗಂಭೀರವಾಗಿದೆ.ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿರುವ ಐವರ ಸ್ಥಿತಿಯೂ ಗಂಭೀರವಾಗಿದ್ದು,‌80ಕ್ಕೂ ಹೆಚ್ಚು ಅಸ್ವಸ್ಥರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಹಾಗೇ 13 ಮಕ್ಕಳ ಆರೋಗ್ಯದಲ್ಲೂ ಸ್ವಲ್ಪ ಚೇತರಿಕೆ ಕಾಣುತ್ತಿದ್ದು ಐಸಿಯುನಲ್ಲೇ ವೈದ್ಯರು ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ.

ಪತ್ನಿಯೂ ಸಾವು

ಮಾರಮ್ಮ ದೇವಿ ವಿಷ ಪ್ರಸಾದ ಪ್ರಕರಣ ಸಾವಿನ ಸಂಖ್ಯೆ ಗೆ ಮತ್ತೊಂದು ಸೇರ್ಪಡೆಯಾಗಿದೆ. ಪತಿಯನ್ನ ಹಿಂಬಾಲಿಸಿದ ಪತ್ನಿ ಮೈಲಿ ಬಾಯಿ (38) ಇಂದು ಬೆಳಗ್ಗೆ 8:45 ಕ್ಕೆ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಮೈಸೂರು ಜೆಎಸ್ ಎಸ್ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಮೈಲಿ ಬಾಯಿಯ ಪತಿ ಶನಿವಾರವೇ ಸಾವನ್ನಪ್ಪಿದ್ದರು. ಈ ದಂಪತಿ ಪುತ್ರಿ ಪ್ರಿಯಾ ಅಸ್ವಸ್ಥಗೊಂಡು ಈಗ ಚೇತರಿಕೆಯಲ್ಲಿದ್ದು, ಸಿಎಂ ಕುಮಾರಸ್ವಾಮಿ ಬೇಟಿ ವೇಳೆ ಸಂಪೂರ್ಣ ವಿದ್ಯಾಬ್ಯಾಸ ಕೊಡಿಸಿ ಸರ್ಕಾರಿ ನೌಕರಿ ಭರವಸೆ ನೀಡಿದ್ದರು. ಕೃಷ್ಣ ನಾಯಕ್ ಮೈಲಿ ಬಾಯಿ ದಂಪತಿಗಳಿಗೆ ಇಬ್ಬರು ಪುತ್ರಿಯರು ಒಬ್ಬ ಪುತ್ರ ಇದ್ದಾರೆ. ಕೃಷ್ಣ ನಾಯಕ್ ಮೈಲಿ ಬಾಯಿ ‌ಹನೂರು ತಾಲೋಕಿನ ಗ್ರಾಮ ಕೋಟೆಪೊದೈನಿವಾಸಿಗಳಾಗಿದ್ದಾರೆ.ಇದರೊಂದಿಗೆ ಪ್ರಕರಣದಲ್ಲಿ ಸತ್ತವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.‌ ವಿಷ ಪ್ರಸಾದ ಸೇವಿಸಿದ್ದ ಮಹಿಳೆ ಮೈಲಿ ಬಾಯಿ ಸಾವನ್ನಪ್ಪಿದ ಹಿನ್ನೆಲೆಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ‌. ದೇವೇಗೌಡ ಭೇಟಿನೀಡಿ ಸಂಬಂಧಿಕರನ್ನು ಭೇಟಿಯಾಗಿ ಸಾಂತ್ವನ‌ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

Published

on

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 days ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ5 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ5 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ6 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ6 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ6 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ1 week ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ1 week ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ1 week ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

Trending