Connect with us

ದಿನದ ಸುದ್ದಿ

ಬಿಹಾರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ; ಬಿಜೆಪಿ ಮೈತ್ರಿ ತೊರೆದ ಜೆಡಿಯು ; ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Published

on

ಸುದ್ದಿದಿನ ಡೆಸ್ಕ್ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ (Politics Development ) ಬಿಹಾರ ಮುಖ್ಯಮಂತ್ರಿ (Bihar Chief minister ) ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್ ( JDU – Nitish Kumar ) ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ (Resignation) ಸಲ್ಲಿಸಿದ್ದಾರೆ.

ಪಾಟ್ನಾದಲ್ಲಿನ ರಾಜಭವನಕ್ಕೆ ಇಂದು ಸಂಜೆ ತೆರಳಿದ ನಿತೀಶ್ ಕುಮಾರ್, ರಾಜ್ಯಪಾಲ ಫಗು ಚೌವ್ಹಾಣ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಕೂಟದಿಂದ ಹೊರಬರುವ ಕುರಿತು ನಿತೀಶ್ ಕುಮಾರ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ ನಡೆದ ಜೆಡಿಯು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಮಧ್ಯೆ ನೂತನ ಸರ್ಕಾರ ರಚನೆಗೆ ಕಸರತ್ತು ನಡೆದಿದ್ದು, ನಿತೀಶ್ ಕುಮಾರ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಆರ್‌ಜೆಡಿ ಮತ್ತು ಕಾಂಗ್ರೆಸ್ ತಿಳಿಸಿವೆ. ಹಿಂದೂಸ್ಥಾನಿ ಅವಾಮ್ ಮೋರ್ಚಾ-ಹೆಚ್‌ಎಎಂ ಸಹ ಬೆಂಬಲ ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ | ಎನ್ಇಪಿ-2020ರ ಯಶಸ್ಸಿನಲ್ಲಿ ಗ್ರಂಥಪಾಲಕರ ಪಾತ್ರ ಮಹತ್ವದ್ದು : ಪ್ರೊ. ಪಿ ಎಸ್ ಯಡಪಡಿತ್ತಾಯ

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ 77 ಶಾಸಕ ಬಲ ಹೊಂದಿದ್ದು, ಆರ್‌ಜೆಡಿ79 , ಜೆಡಿಯು 45 , ಕಾಂಗ್ರೆಸ್ 19, ಎಡಪಕ್ಷಗಳು 16, ಹಾಗೂ ಹೆಚ್‌ಎಎಂ 4 ಶಾಸಕ ಬಲ ಹೊಂದಿವೆ. ತಮಗೆ 164 ಶಾಸಕರ ಬೆಂಬಲವಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದು, ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಹಕ್ಕು ಮಂಡಿಸಿದ್ದಾರೆ. ಈ ಮಧ್ಯೆ ಮೈತ್ರಿ ಕಡಿದುಕೊಳ್ಳುವ ಮೂಲಕ ಜೆಡಿಯು ಜನಾದೇಶಕ್ಕೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದ್ದು, ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್, ನಿತೀಶ್ ಕುಮಾರ್ ಅವರು ಮಾಡಿರುವ ವಿಶ್ವಾಸ ದ್ರೋಹವನ್ನು ಬಿಹಾರ ಜನತೆ ಎಂದೂ ಕ್ಷಮಿಸುವುದಿಲ್ಲ ಎಂದು ಟೀಕಿಸಿದರು.

2020ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭಾಗವಾಗಿದ್ದ ಜೆಡಿಯು ಕಡಿಮೆ ಸ್ಥಾನ ಪಡೆದು ಬಿಜೆಪಿ ಗಣನೀಯ ಸ್ಥಾನ ಪಡೆದಿದ್ದರೂ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್ ಕುಮಾರ್ ಅವರಿಗೆ ಬಿಟ್ಟುಕೊಡಲಾಗಿತ್ತು. ಇದೀಗ ಮೈತ್ರಿ ಕಡಿದುಕೊಳ್ಳೂವ ಮೂಲಕ ಅವರು, ಜನಾದೇಶ ಧಿಕ್ಕರಿಸಿದ್ದಾರೆ ಎಂದು ಜೈಸ್ವಾಲ್ ಆರೋಪಿಸಿದ್ದಾರೆ.

ಎಲ್‌ಜೆಪಿ ವರಿಷ್ಠ ಚಿರಾಗ್ ಪಾಸ್ವಾನ್ ಅವರು ಸಹ ನಿತೀಶ್ ಕುಮಾರ್ ನಿರ್ಧಾರವನ್ನು ಖಂಡಿಸಿದ್ದಾರೆ. ರಾಷ್ಟ್ರೀಯ ಲೋಕಜನಶಕ್ತಿ ಪಕ್ಷದ ನಾಯಕ ಮತ್ತು ಕೇಂದ್ರ ಸಚಿವ ಪಶುಪತಿ ಕುಮಾರ್ ಪರಸ್ ಅವರು ಜೆಡಿಯು ನಿರ್ಧಾರವನ್ನು ಟೀಕಿಸಿದ್ದು, ತಮ್ಮ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending