ದಿನದ ಸುದ್ದಿ

ಗಾನ ಗಾರುಡಿಗ ಎಸ್ ಪಿ ಬಿ ಇನ್ನಿಲ್ಲ..!

Published

on

ಸುದ್ದಿದಿನ, ಚೆನೈ :ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಹ್ಮಣ್ಯಂ (74) ಅವರು ಚಿಕಿತ್ಸೆ ಲಭಿಸದೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.

ಗುರುವಾರ ಸಂಜೆ ಎಂಜಿಎಂ ಆಸ್ಪತ್ರೆಯು ಎಸ್‍ಪಿಬಿಯವರ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ನೀಡಲಾಗಿತ್ತು. ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರು ಆಗಸ್ಟ್ 5ನೇ ತಾರೀಖಿನಂದು ಕೊರೋನಾ ಪಾಸಿಟಿವ್ ಗೆ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ನಂತರ ಕೊರೋನಾ ನೆಗೆಟಿವ್ ವರದಿ ಬಂದಿತ್ತು. ಅವರು ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version