ದಿನದ ಸುದ್ದಿ
ಜನವರಿಯಲ್ಲಿ ಅಂತರಾಷ್ಟ್ರೀಯ ‘ಸಿರಿಧಾನ್ಯ ಮೇಳ’ ಆಯೋಜನೆ : ಬಿ.ಸಿ. ಪಾಟೀಲ್
ಸುದ್ದಿದಿನ ಡೆಸ್ಕ್ : ಬರುವ ಜನವರಿ ತಿಂಗಳಲ್ಲಿ ರಾಜ್ಯದಲ್ಲಿ ಅಂತರಾಷ್ಟ್ರೀಯ ‘ಸಿರಿಧಾನ್ಯ ಮೇಳ’ ಆಯೋಜಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿರಿಧಾನ್ಯ ಉತ್ತೇಜನಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿಶ್ವಸಂಸ್ಥೆ 2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಿರುವುದರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಆಯೋಜಿಸಿರುವುದಾಗಿ ತಿಳಿಸಿದರು.
ಮೂರು ದಿನಗಳ ಮೇಳದಲ್ಲಿ ರೈತರು ಕೃಷಿ ವಿಜ್ಞಾನಿಗಳು ಮತ್ತು ತಜ್ಞರು ಭಾಗವಹಿಸಲಿದ್ದು, ಇದರ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಲಾಗುವುದು ಎಂದರು.
ಈ ಬಾರಿಯ ಮುಂಗಾರಿನಲ್ಲಿ 82 ಲಕ್ಷದ 67 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು, ಈ ಪೈಕಿ 80 ಲಕ್ಷ 40 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿರುವುದಾಗಿ ಬಿ.ಸಿ ಪಾಟೀಲ ತಿಳಿಸಿದರು.
ಭೌಗೋಳಿಕ ಸೂಚ್ಯಂಕ ಪಡೆದಿರುವ ಕಲಬುರಗಿ ತೊಗರಿ ಬೇಳೆಯನ್ನು ಭೀಮ ಪಲ್ಸಸ್ ಎಂಬ ಬ್ರ್ಯಾಂಡ್‌ನಡಿ ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243