Connect with us

ದಿನದ ಸುದ್ದಿ

ಮಕ್ಕಳಿಗೆ ಸಂಸ್ಕಾರ ಕೊಡದಿದ್ದರೆ ಪೋಷಕರು ವೃದ್ಧಾಶ್ರಮಕ್ಕೆ ಹೋಗಬೇಕಾದಿತು; ಹೊರಟ್ಟಿ ಹೇಳಿಕೆ

Published

on

ಸುದ್ದಿದಿನ ಚಿತ್ರದುರ್ಗ: ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವ ಹೊಣೆಗಾರಿಕೆ ಪೋಷಕರದ್ದು. ಇದು ಇಲ್ಲದೇ ಹೋದಾಗ ಮಕ್ಕಳು ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸುತ್ತಾರೆ. ಹಾಗಾಗಿ ಮಕ್ಕಳನ್ನು ಡಾಕ್ಟರ್, ಇಂಜಿನಿಯರ್ ಆಗಿಸುವ ಬದಲು ಅವರನ್ನು ಮನುಷ್ಯನನ್ನಾಗಿ ರೂಪಿಸಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ತಾಲೂಕಿನ ಸಿರಿಗೆರೆಯ ಬಿಎಲ್ಆರ್ ಪದವಿ ಪೂರ್ವ ಕಾಲೇಜಿನ ಮೈದಾನದ ಮಹಾಮಂಟಪದಲ್ಲಿ ಆಯೋಜಿಸಿದ್ದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳವರ 26ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲೆ, ಸಾಹಿತ್ಯ ಸಂಸ್ಕೃತಿಗಳು ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುತ್ತವೆ. ಮಕ್ಕಳಿಗಾಗಿ ತಂದೆ-ತಾಯಿಗಳು ತ್ಯಾಗ ಮಾಡುತ್ತಾರೆ. ಆದರೆ, ಆ ಮಕ್ಕಳು ವೃದ್ಧಾಪ್ಯದಲ್ಲಿ ವೃದ್ಧಾಶ್ರಮಕ್ಕೆ ಕಳಿಸುತ್ತಾರೆ. ಇದು ಸಂಸ್ಕಾರದ ಕೊರತೆ. ಹಿರಿಯ ಗುರುಗಳು ಇಲ್ಲಿ ಸಂಸ್ಕಾರದ ಬೀಜವನ್ನು ಬಿತ್ತಿದ್ದಾರೆ. ಆ ಬೀಜ ಇಂದು ಹೆಮ್ಮರವಾಗಿ ಬೆಳೆದು ಸಮಾಜಕ್ಕೆ ಉತ್ತಮ ಫಲವನ್ನು ನೀಡುತ್ತಿದೆ. ಸಿರಿಗೆರೆ ಮಠ ನಾಡಿನ ಇತರೆ ಮಠಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಮಾತನಾಡಿ, ಕನ್ನಡ ಶಕ್ತಿಶಾಲಿಯಾದ ಭಾಷೆ. ಈ ಭಾಷೆಯಲ್ಲಿ ಅದ್ಭುತವಾದ ಪದ ಸಂಪತ್ತಿದೆ. ಆದರೆ, ಕನ್ನಡ ಭಾಷೆಯಲ್ಲಿ ಇಂಗ್ಲಿಷ್ ಪದ ಮಿಶ್ರಗೊಳಿಸಿ ಕಲುಷಿತ ಮಾಡಲಾಗುತ್ತಿದೆ ಎಂದು ತಿಳಿಸಿದರು.

ದಿನದ ಸುದ್ದಿ

ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಹೆಚ್ಚು ಅರ್ಜಿಗಳ ನಿರೀಕ್ಷೆ : ಸಚಿವ ಕೃಷ್ಣ ಬೈರೇಗೌಡ

Published

on

ಸುದ್ದಿದಿನ, ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 30 ಲಕ್ಷ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ 898 ನಾಡಕಚೇರಿಗಳೂ ಸೇರಿದಂತೆ ಬಾಪೂಜಿ ಸೇವಾಕೇಂದ್ರ, ಗ್ರಾಮ-2, ಬೆಂಗಳೂರು-1ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಹಾಗೂ ಇದೇ ಉದ್ದೇಶಕ್ಕಾಗಿ ಅಭಿವೃದ್ಧಿಪಡಿಸಲಾಗುತ್ತಿರುವ ಆಪ್ ಮೂಲಕವೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಸಚಿವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ. ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending