ದಿನದ ಸುದ್ದಿ
ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಹಾಂತೇಶ್ ಬೀಳಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಯಾವುದೇ ಸ್ಥಳ ತೋರಿಸಿಲ್ಲ. ಈವರೆಗೆ ಬೆಂಗಳೂರಿನ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಶಿವಾನಂದ ಕಾಪಶಿ ಅವರು ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243