Connect with us

ದಿನದ ಸುದ್ದಿ

ಕೌಶಲ್ಯಯುತ ಶಿಕ್ಷಣ ವೃತ್ತಿ ಭವಿಷ್ಯಕ್ಕೆ ಆಧಾರ :‌ ಸಹಾಯಕ ಪ್ರಾಧ್ಯಾಪಕ ಎ.ಆರ್. ಸಲೀಮ್ ಮಲಿಕ್ ಕಿವಿಮಾತು

Published

on

ಸುದ್ದಿದಿನ,ಹರಿಹರ:ಪ್ರಸ್ತುತ ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಜನರು ತಮ್ಮ ಕೌಶಲ್ಯವನ್ನು ಆಧರಿಸಿದ ಶಿಕ್ಷಣದ ಕಡೆ ಆಸಕ್ತಿ ತೋರಬೇಕು. ತಂತ್ರಜ್ಞಾನ ಸಂಬಂಧಿತ ಕೌಶ್ಯಲ್ಯಗಳು ವೃತ್ತಿ ಭವಿಷ್ಯಕ್ಕೆ ಉಜ್ವಲ ಅವಕಾಶಗಳನ್ನು ಪಡೆಯಬಹುದು ಎಂದು ದಾವಣಗೆರೆಯ ಜೆ.ಟಿ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಎ.ಆರ್.ಸಲೀಮ್ ಮಲಿಕ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ಪ್ರೇರಣಾ ಕೋಶದ ಸಹಯೋಗದಲ್ಲಿ ‘ಮೃದು ಕೌಶಲ್ಯಗಳು ಮತ್ತು ವ್ಯಕ್ತಿತ್ವ ವಿಕಸನ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಮೂಲಕ ಜಾಗತಿಕ ಸಂದರ್ಭದಲ್ಲಿ ವೃತ್ತಿಪರ ವ್ಯಕ್ತಿಗಳು ಬೇರೆಯವರಿಗಿಂತ ಭಿನ್ನವಾಗಿ ತಮ್ಮನ್ನು ತಾವು ರೂಪಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಸ್ಪರ್ಧಾತ್ಮಕ ಜಗತ್ತಿನಲ್ಲಿ ವೃತ್ತಿಪರ ಬದುಕು ಕಟ್ಟಿಕೊಳ್ಳುವ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎನ್.ರಮೇಶ್ ಅವರು ಮಾತನಾಡಿ, ವೃತ್ತಿ ಆಧಾರಿತ ಶಿಕ್ಷಣದ ಜೊತೆಗೆ ಮೃದು ಕೌಶಲ್ಯಗಳನ್ನು ಪಡೆಯಿರಿ. ಸರ್ಕಾರದ ಸೌಲಭ್ಯಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ವೃತ್ತಿ ಭವಿಷ್ಯವನ್ನು ತಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಐ.ಕ್ಯೂ.ಎಸ್.ಸಿ ಸಂಯೋಜಕರಾದ ಡಾ.ಅನಂತನಾಗ್ ಹೆಚ್.ಪಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಾಬು ಕೆ.ಎ ಅವರುಗಳು ಉಪಸ್ಥಿತರಿದ್ದು ಮಾತನಾಡಿದರು.

ವಿದ್ಯಾರ್ಥಿನಿ ಕು.ಆಶ್ಲೇಷ ಎಸ್ ಪ್ರಾರ್ಥಿಸಿದರು, ಕಾಲೇಜಿನ ಪ್ರೇರಣಾ ಕೋಶದ ಸಂಚಾಲಕರು, ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಆದ ಬಸವರಾಜ ಬಿ.ಪಾಟೀಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಾಣಿಜ್ಯಶಾಸ್ತç ವಿಭಾಗದ ವಿದ್ಯಾರ್ಥಿ ಆಕಾಶ್ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending