ದಿನದ ಸುದ್ದಿ
ರಾಜ್ಯದ ನಾಲ್ಕು ವಿಶ್ವವಿದ್ಯಾಲಯಗಳ ಪದವಿ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿ ಯೋಜನೆ ಜಾರಿಗೆ : ಆಯುಕ್ತ ಜಿ.ಜಗದೀಶ್
ಸುದ್ದಿದಿನ, ದಾವಣಗೆರೆ : ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ 4 ವಿಶ್ವ ವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ 3 ವರ್ಷದ ಪದವಿಯೊಂದಿಗೆ ಕೌಶಲ್ಯ ತರಬೇತಿ ನೀಡುವ ಯೋಜನೆ ಜಾರಿಗೆ ಬರಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ್ ತಿಳಿಸಿದ್ದಾರೆ
ದಾವಣಗೆರೆಯಲ್ಲಿಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಲಿಕೆ ಜೊತೆಗೆ ಕೌಶಲ್ಯ ಯೋಜನೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆ, ತುಮಕೂರು, ರಾಯಚೂರು ಮತ್ತು ಗುಲ್ಬರ್ಗಾ ಜಿಲ್ಲೆಗಳನ್ನು ಪೈಲೆಟ್ ಪ್ರಾಜೆಕ್ಟ್‌ನಂತ ಆಯ್ಕೆ ಮಾಡಲಾಗಿದೆ. 3 ವರ್ಷದ ಪದವಿಯಲ್ಲಿ ಎರಡು ವರ್ಷ ಶಿಕ್ಷಣ ಮತ್ತು ಮೂರನೇ ವರ್ಷ ಕಲಿಕೆಯ ಜೊತೆಗೆ ಗಳಿಕೆ ಈ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಮುಂದಿನ ವರ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೋಜನೆಯನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243